ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಬಿಜೆಪಿ ತೊರೆದ ಬೆಂಗಾಲಿ ನಟಿ ಶ್ರಬಂತಿ ಚಟರ್ಜಿ

Last Updated 11 ನವೆಂಬರ್ 2021, 8:56 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿ, ಟಿಎಂಸಿ ಅಭ್ಯರ್ಥಿ ವಿರುದ್ಧ ಸೋತಿದ್ದ ಬೆಂಗಾಲಿ ನಟಿ ಶ್ರಬಂತಿ ಚಟರ್ಜಿ ಗುರುವಾರ ಪಕ್ಷವನ್ನು ತೊರೆದಿದ್ದಾರೆ.

’ಪಶ್ಚಿಮ ಬಂಗಾಳವನ್ನು ಪ್ರಗತಿಯತ್ತ ಕೊಂಡೊಯ್ಯಲು ಪಕ್ಷದಲ್ಲಿ ಪ್ರಾಮಾಣಿಕತೆ ಮತ್ತು ಉಪಕ್ರಮದ ಕೊರತೆಯಿರುವ ಕಾರಣಪಕ್ಷ ತೊರೆಯುತ್ತಿರುವುದಾಗಿ’ ಅವರು ಟ್ವೀಟ್‌ ಮಾಡಿದ್ದಾರೆ.

ಚುನಾವಣೆಯಲ್ಲಿ ಉತ್ತಮ ಪ್ರಚಾರದ ಹೊರತಾಗಿಯೂ ಬಿಜೆಪಿ, ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ಕೆಳಗಿಳಿಸಲು ವಿಫಲವಾದ ಹಿನ್ನೆಲೆಯಲ್ಲಿ ಶ್ರಬಂತಿಯವರು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು.

’ಚುನಾವಣೆ ನಂತರ ಅವರು ಪಕ್ಷದಲ್ಲಿ ಇದ್ದರೋ, ಇಲ್ಲವೋ ನನಗೇ ಗೊತ್ತಿಲ್ಲ. ಅವರ ನಿರ್ಧಾರದಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT