ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಜಿ–20 ಸಭೆ

Last Updated 23 ನವೆಂಬರ್ 2022, 18:05 IST
ಅಕ್ಷರ ಗಾತ್ರ

ನವದೆಹಲಿ: ಭಾರತವು ಜಿ–20 ಗುಂಪಿನ ಅಧ್ಯಕ್ಷತೆ ವಹಿಸಿಕೊಂಡ ನಂತರ ನಡೆಯಲಿರುವ ಸಭೆಗಳ ಪೈಕಿ ಎರಡು ಸಭೆಗಳು ಬೆಂಗಳೂರಿನಲ್ಲಿ ನಿಗದಿಯಾಗಿವೆ.

ಹಣಕಾಸು ಮತ್ತು ಕೇಂದ್ರೀಯ ಬ್ಯಾಂಕ್‌ಗಳ ಪ್ರತಿನಿಧಿಗಳ ಸಭೆ ಡಿಸೆಂಬರ್‌ 13 ರಿಂದ 15ರವರೆಗೆ ಹಾಗೂ ಜಿ–20 ಚೌಕಟ್ಟು ನಿರೂಪಣೆಗೆ ಸಂಬಂಧಿಸಿದ ತಂಡದ ಸಭೆಯು ಡಿಸೆಂಬರ್‌ 16 ಮತ್ತು 17ರಂದು ನಡೆಯಲಿದೆ.

ಭಾರತವು ಡಿಸೆಂಬರ್‌ 1 ರಂದು ಗುಂಪಿನ ಅಧ್ಯಕ್ಷತೆ ವಹಿಸಿಕೊಳ್ಳಲಿದೆ. ನವೆಂಬರ್‌ 16ರಂದು ಇಂಡೊನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧ್ಯಕ್ಷತೆ ಹಸ್ತಾಂತರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT