ಮಂಗಳವಾರ, ಸೆಪ್ಟೆಂಬರ್ 21, 2021
23 °C

ಬೆಂಗಳೂರು– ಮೈಸೂರು ಆರ್ಥಿಕ ಕಾರಿಡಾರ್‌ ಪೂರ್ಣ ಆಗುವುದು ಯಾವಾಗ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಶ ಪಥಗಳ ಆರ್ಥಿಕ ಕಾರಿಡಾರ್ ನಿರ್ಮಾಣ ಕಾಮಗಾರಿಯನ್ನು 2022ರ ಅಕ್ಟೋಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ ತಿಳಿಸಿದರು.

‘10 ಪಥಗಳ ಬೆಂಗಳೂರು-ಮೈಸೂರು ಆರ್ಥಿಕ ಕಾರಿಡಾರ್ ಅನ್ನು ದಾಖಲೆಯ ವೇಗದಲ್ಲಿ ನಿರ್ಮಿಸಲಾಗುತ್ತಿದೆ. ₹8,172 ಕೋಟಿ ವೆಚ್ಚದ ಆರ್ಥಿಕ ಕಾರಿಡಾರ್ 2022ರ ಅಕ್ಟೋಬರ್‌ ಒಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಇದು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಈಗಿನ 3 ಗಂಟೆಯಿಂದ ಒಂದೂವರೆ ಗಂಟೆಗೆ (90 ನಿಮಿಷಕ್ಕೆ) ತಗ್ಗಿಸುತ್ತದೆ’ ಎಂದು ಗಡ್ಕರಿ ಟ್ವೀಟ್ ಮಾಡಿದ್ದಾರೆ.

ಎರಡು ನಗರಗಳ ನಡುವಿನ ರಸ್ತೆ ಯೋಜನೆಯನ್ನು ಭಾರತಮಾಲಾ ಪರಿಯೋಜನ ಹಂತ -1ರ ಅಡಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಎರಡು ಪ್ಯಾಕೇಜ್‌ಗಳಾಗಿ ಕೈಗೆತ್ತಿಕೊಳ್ಳಲಾಗಿದ್ದು, ಮೊದಲನೆಯ ಪ್ಯಾಕೇಜ್‌ನಲ್ಲಿ ಬೆಂಗಳೂರಿನಿಂದ ಮದ್ದೂರು ತಾಲ್ಲೂಕಿನ ನಿಡಘಟ್ಟವರೆಗೆ ಮತ್ತು ಎರಡನೆಯ ಪ್ಯಾಕೇಜ್‌ನಲ್ಲಿ ನಿಡಘಟ್ಟದಿಂದ ಮೈಸೂರಿನವರೆಗೆ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು