ಶುಕ್ರವಾರ, ಅಕ್ಟೋಬರ್ 23, 2020
24 °C

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಹಿಂಸಾಚಾರ: ತನಿಖೆ ಆರಂಭಿಸಿದ ಎನ್‌ಐಎ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬೆಂಗಳೂರಿನ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ಆಗಸ್ಟ್‌ನಲ್ಲಿ ನಡೆದ ಹಿಂಸಾಚಾರ ಕುರಿತ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಕೈಗೆತ್ತಿಕೊಂಡಿದೆ.

ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಯುಎಪಿಎ),  ಬೆಂಕಿ ಹಚ್ಚುವುದು, ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿ ಹಾನಿಗೆ ಸಂಬಂಧಿಸಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

‘ಐಜಿ ರ‍್ಯಾಂಕಿನ ಅಧಿಕಾರಿ ನೇತೃತ್ವದ ತಂಡವೊಂದನ್ನು ಬೆಂಗಳೂರಿಗೆ ಕಳುಹಿಸಲಾಗಿದೆ’ ಎಂದು ಎನ್‌ಐಎ ವಕ್ತಾರರೊಬ್ಬರು ತಿಳಿಸಿದ್ದಾರೆ.

‘ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಹೋದರಿಯ ಮಗ, ನವೀನ್‌ ಅವರು ಪ್ರವಾದಿ ಮೊಹ್ಮದ್‌ ಕುರಿತ ಅವಹೇಳನಕಾರಿ ಪೋಸ್ಟ್‌ವೊಂದನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ, ಗುಂಪೊಂದು ಆಗಸ್ಟ್‌ 11ರ ರಾತ್ರಿ ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಿತ್ತು. ನಂತರ, ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿತ್ತು’ ಎಂದು ವಕ್ತಾರ ವಿವರಿಸಿದರು.

‘ಎಸ್‌ಡಿಪಿಐನ ರಾಜ್ಯ ಘಟಕದ ಕಾರ್ಯದರ್ಶಿ ಮುಜಾಮಿಲ್‌ ಪಾಷಾ ಸಭೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ನಂತರ ಅವರು, ಗುಂಪೊಂದು ಪ್ರಚೋದಿಸಿ, ಹಿಂಸಾಚಾರ ನಡೆಸುವಂತೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರಿಗೆ ನಿರ್ದೇಶನ ನೀಡಿದ್ದರು ಎಂಬ ಆರೋಪವೂ ಇದೆ‘ ಎಂದು ತಿಳಿಸಿದರು.

ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್‌ ಠಾಣೆಗಳಲ್ಲಿ ವಿಧ್ವಂಸಕ ಕೃತ್ಯ ಎಸಗಿ, ಆಸ್ತಿ ಹಾನಿಗೊಳಿಸಿದ್ದ ಪ್ರತಿಭಟನಕಾರರು, ಶಾಸಕರ ಮನೆ ಮೇಲೂ ದಾಳಿ ನಡೆಸಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು