ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕೌಂಟೆನ್ಸಿ ಪರೀಕ್ಷೆಲಿ ದೋಷ: ಗ್ರೇಸ್ ಮಾರ್ಕ್ಸ್ ಬಗ್ಗೆ ಸಿಬಿಎಸ್‌ಇ ಸ್ಪಷ್ಟನೆ

12ನೇ ತರಗತಿ ಅಕೌಂಟೆನ್ಸಿ ಪ್ರಶ್ನೆಪತ್ರಿಕೆಯಲ್ಲಿ ದೋಷ
Last Updated 14 ಡಿಸೆಂಬರ್ 2021, 10:32 IST
ಅಕ್ಷರ ಗಾತ್ರ

ನವದೆಹಲಿ: 12ನೇ ತರಗತಿಯ ಅಕೌಂಟೆನ್ಸಿ ಪ್ರಶ್ನೆಪತ್ರಿಕೆಯಲ್ಲಿ ದೋಷವಿದ್ದು, ವಿದ್ಯಾರ್ಥಿಗಳಿಗೆ ಆರು ಕೃಪಾಂಕಗಳನ್ನು ನೀಡಲಾಗುತ್ತದೆ ಎಂಬ ವರದಿಯನ್ನು ಕೇಂದ್ರೀಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ಮಂಗಳವಾರ ತಳ್ಳಿಹಾಕಿದೆ.

ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಂಡಳಿಯ ಪರೀಕ್ಷಾ ನಿಯಂತ್ರಕರ ಹೆಸರಿನಲ್ಲಿ ಹರಿದಾಡುತ್ತಿರುವ ವಿಡಿಯೊ ನಕಲಿ, ಆಧಾರ ರಹಿತವಾದುದು ಎಂದು ಸಿಬಿಎಸ್‌ಇ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಡಿಸೆಂಬರ್ 13 ರಂದು ನಡೆದ 12ನೇ ತರಗತಿಯ ಅಕೌಂಟೆನ್ಸಿ ಟರ್ಮ್-1 ಪ್ರಶ್ನೆಪತ್ರಿಕೆಯಲ್ಲಿನ ದೋಷದಿಂದಾಗಿ ಕೃಪಾಂಕಗಳನ್ನು ನೀಡಲಾಗುತ್ತದೆ ಎಂದು ನಕಲಿ ವರದಿಗಳನ್ನು ಪ್ರಸಾರ ಮಾಡಲಾಗುತ್ತಿದೆ. ಈ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT