ಭಾನುವಾರ, ಜನವರಿ 24, 2021
24 °C

ಭಂಡಾರ ಆಸ್ಪತ್ರೆ ದುರಂತ: ಪ್ರಧಾನಿ ಮೋದಿ, ದೇವೇಂದ್ರ ಫಡಣವೀಸ್‌ ವಿಷಾದ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ/ಮುಂಬೈ: ಮಹಾರಾಷ್ಟ್ರದ ಭಂಡಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತ ಮತ್ತು ಅದರಲ್ಲಿ 10 ನವಜಾತ ಶಿಶುಗಳು ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ಮಹಾರಾಷ್ಟ್ರದ ಭಂಡಾರದ ಆಸ್ಪತ್ರೆಯ ದುರಂತದಲ್ಲಿ ನಾವು ಅಮೂಲ್ಯವಾದ ಮುಗ್ಧ ಜೀವಗಳನ್ನು ಕಳೆದುಕೊಂಡಿದ್ದೇವೆ. ದುಃಖಿತ ಕುಟುಂಬಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ತನಿಖೆಗೆ ಫಡಣವೀಸ್‌ ಒತ್ತಾಯ: ‘ಭಂಡಾರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಅವಘಡ ಮನಸ್ಸಿಗೆ ತುಂಬಾ ನೋವನ್ನು ನೀಡಿದೆ’ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು ತಿಳಿಸಿದ್ದಾರೆ.

‘ಸರ್ಕಾರ ಈ ಘಟನೆ ಬಗ್ಗೆ ತನಿಖೆ ನಡೆಸಬೇಕು. 10 ನವಜಾತ ಶಿಶುಗಳ ಸಾವಿಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು