ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್‌ ಬಯೊಟೆಕ್‌ ಲಸಿಕೆಯ ಪರಿಣಾಮಕಾರಿ ಫಲಿತಾಂಶ

ಕೊವ್ಯಾಕ್ಸಿನ್‌ ಮೊದಲ ಹಂತದ ಪ್ರಯೋಗ
Last Updated 16 ಡಿಸೆಂಬರ್ 2020, 21:39 IST
ಅಕ್ಷರ ಗಾತ್ರ

ನವದೆಹಲಿ: ಭಾರತ್‌ ಬಯೊಟೆಕ್‌ ಅಭಿವೃದ್ಧಿಪಡಿಸಿರುವ ‘ಕೊವ್ಯಾಕ್ಸಿನ್‌’ನ ಮೊದಲ ಹಂತದ ಕ್ಲಿನಿಕಲ್‌ ಪ್ರಯೋಗದ ಮಧ್ಯಂತರ ಪರೀಕ್ಷೆಯಲ್ಲಿ ಪರಿಣಾಮಕಾರಿ ಫಲಿತಾಂಶ ಲಭ್ಯವಾಗಿದೆ.

ಭಾರತೀಯ ವೈದ್ಯಕೀಯ ಸಂಶೋಧನೆ ಮಂಡಳಿ (ಐಸಿಎಂಆರ್‌) ಸಹಯೋಗದಲ್ಲಿ ಈ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದ್ದು, ಯಾವುದೇ ರೀತಿ ಗಂಭೀರವಾದ ಅಥವಾ ಅಡ್ಡಪರಿಣಾಮ ಬೀರಿಲ್ಲ ಎನ್ನುವುದು ಗೊತ್ತಾಗಿದೆ.

ಪ್ರಯೋಗದ ಸಮಯದಲ್ಲಿ ಒಂದು ವ್ಯತಿರಿಕ್ತ ಪರಿಣಾಮ ಬೀರಿರುವುದು ವರದಿಯಾಗಿದೆ. ಆದರೆ, ಇದು ಲಸಿಕೆಗೆ ಸಂಬಂಧಿಸಿದ್ದಲ್ಲ ಎನ್ನುವುದು ಪರೀಕ್ಷೆಯ ಸಂದರ್ಭದಲ್ಲಿ ಗೊತ್ತಾಗಿದೆ.

‘ಕೊವ್ಯಾಕ್ಸಿನ್‌–ಬಿಬಿವಿ152’ ಸುರಕ್ಷತೆ ಮತ್ತು ದೇಹದ ಪ್ರತಿರೋಧಕ ಶಕ್ತಿಯ ಮೌಲ್ಯಮಾಪನ ಮಾಡುವ ನಿಟ್ಟಿನಲ್ಲಿ ಮೊದಲ ಹಂತದ ಕ್ಲಿನಿಕಲ್‌ ಪ್ರಯೋಗವನ್ನು ಕೈಗೊಳ್ಳಲಾಗಿತ್ತು. ಲಸಿಕೆಯನ್ನು 2 ಡಿಗ್ರಿ ಸೆಲ್ಸಿಯಸ್‌ ಮತ್ತು 8 ಡಿಗ್ರಿ ಸೆಲ್ಸಿಯಸ್‌ನಲ್ಲಿ ಸಂಗ್ರಹಿಸಿಡಲಾಗಿತ್ತು. ಈ ಲಸಿಕೆಯ ಪ್ರಯೋಗ ಇನ್ನೂ ಮುಂದುವರಿದಿದೆ.

11 ಆಸ್ಪ‍ತ್ರೆಗಳಲ್ಲಿ 375 ಮಂದಿಯ ಮೇಲೆ ಈ ಲಸಿಕೆಯ ಪ್ರಯೋಗವನ್ನು ಕೈಗೊಳ್ಳಲಾಗಿದೆ. ಈ ಪ್ರಯೋಗಕ್ಕೆ ದೇಶದ ವಿವಿಧ ಭಾಗಗಳಿಂದ ಜನರನ್ನು ಆಯ್ಕೆ ಮಾಡಲಾಗಿತ್ತು. ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳನ್ನು ಸಹ ಪರಿಗಣಿಸಲಾಗಿತ್ತು. ಲಸಿಕೆಯ ಎರಡು ಡೋಸ್‌ಗಳನ್ನು ಇವರಿಗೆ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT