ನವದೆಹಲಿ: ಸಂಬಂಧಪಟ್ಟ ಆಡಳಿತದ ಅನುಮೋದನೆ ದೊರೆತಲ್ಲಿ 2021ರ ಎರಡನೇ ತ್ರೈಮಾಸಿಕದಲ್ಲಿ ಕೋವಾಕ್ಸಿನ್ ಲಸಿಕೆ ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಭಾರತ್ ಬಯೋಟೆಕ್ನ ಅಂತರರಾಷ್ಟ್ರೀಯ ಕಾರ್ಯನಿರ್ವಾಹಕ ನಿರ್ದೇಶಕ ಸಾಯಿ ಪ್ರಸಾದ್ ಭಾನುವಾರ ತಿಳಿಸಿದ್ದಾರೆ.

ಮೂರನೇ ಹಂತದ ಪ್ರಯೋಗವನ್ನು ದೇಶದಾದ್ಯಂತ ಯಶಸ್ವಿಯಾಗಿ ಪೂರೈಸುವುದು ಕಂಪನಿಯ ತಕ್ಷಣದ ಆದ್ಯತೆಯಾಗಿದೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ:Covd-19 Vaccine Update | 3ನೇ ಹಂತದ ಪ್ರಯೋಗಕ್ಕೆ ಕೋವಾಕ್ಸಿನ್ ಲಸಿಕೆ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) – ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಹಯೋಗದೊಂದಿಗೆ ಕೋವಾಕ್ಸಿನ್ ಅಭಿವೃದ್ಧಿಪಡಿಸಲಾಗಿದೆ.

‘ಕೊನೆಯ ಹಂತದ ಪ್ರಯೋಗದ ಬಳಿಕ ಲಸಿಕೆಯ ಸುರಕ್ಷತೆ, ದಕ್ಷತೆ ದತ್ತಾಂಶಗಳ ಆಧಾರದಲ್ಲಿ ಎಲ್ಲ ರೀತಿಯ ಅನುಮೋದನೆಗಳು ದೊರೆತರೆ 2021ರ ಎರಡನೇ ತ್ರೈಮಾಸಿಕದಲ್ಲಿ ಲಸಿಕೆ ಬಿಡುಗಡೆ ಮಾಡುವ ಗುರಿ ಹೊಂದಲಾಗಿದೆ’ ಎಂದು ಸಾಯಿ ಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ:‘ಕೊವ್ಯಾಕ್ಸಿನ್: ಎರಡನೇ ಹಂತದ ಪ್ರಯೋಗದ ದತ್ತಾಂಶ ನೀಡಿ’

ಕೋವಾಕ್ಸಿನ್ ಮೂರನೇ ಹಂತದ ಪ್ರಯೋಗಕ್ಕೆ ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಇತ್ತೀಚೆಗೆ ಅನುಮತಿ ನೀಡಿದೆ. ಜತೆಗೆ, ಲಸಿಕೆಯ ಎರಡನೇ ಹಂತದ ಪ್ರಯೋಗದ ದತ್ತಾಂಶ ಹಾಗೂ ಕೆಲವು ಸ್ಪಷ್ಟನೆಗಳನ್ನು ನೀಡಬೇಕು ಎಂದು ಸೂಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.