ಕೋವಿಡ್ ಲಸಿಕೆ: ಭಾರತ್ ಬಯೋಟೆಕ್ ‘ಕೊವ್ಯಾಕ್ಸಿನ್‘ ಬಳಕೆ ಅನುಮತಿಗೆ ಮನವಿ

ನವದೆಹಲಿ: ‘ಭಾರತ್ ಬಯೋಟೆಕ್ ಸಂಸ್ಥೆಯು ತಾನು ಅಭಿವೃದ್ಧಿಪಡಿಸಿರುವ ಕೋವಿಡ್–19 ಲಸಿಕೆ ಕೊವ್ಯಾಕ್ಸಿನ್ ಅನ್ನು ತುರ್ತು ಸಂದರ್ಭದಲ್ಲಿ ಬಳಸಲು ಅನುಮತಿ ನೀಡುವಂತೆ ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಇಲಾಖೆಗೆ ಮನವಿ ಮಾಡಿದೆ’ ಎಂದು ಮೂಲಗಳು ಸೋಮವಾರ ತಿಳಿಸಿವೆ.
ಹೈದರಾಬಾದ್ನ ಭಾರತ್ ಬಯೋಟೆಕ್ ಸಂಸ್ಥೆಯು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ (ಐಸಿಎಂಆರ್) ಸಹಯೋಗದಲ್ಲಿ ಕೊವ್ಯಾಕ್ಸಿನ್ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.
ಇದಕ್ಕೂ ಮುನ್ನ ಫೈಜರ್ ಹಾಗೂ ಭಾರತದ ಸೆರಂ ಇನ್ಸ್ಟಿಟ್ಯೂಟ್, ತಾವು ಅಭಿವೃದ್ಧಿಪಡಿಸಿರುವ ಲಸಿಕೆಗಳನ್ನು ತುರ್ತು ಸಂದರ್ಭದಲ್ಲಿ ಬಳಸಲು ಅನುಮತಿ ಕೋರಿದ್ದವು.
‘ಭಾರತ್ ಬಯೋಟೆಕ್, ಸೇರಂ ಇನ್ಸ್ಟಿಟ್ಯೂಟ್ ಹಾಗೂ ಫೈಜರ್ ಸಂಸ್ಥೆಗಳು ಸಲ್ಲಿಸಿರುವ ಅರ್ಜಿಗಳನ್ನು ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಸಿಡಿಎಸ್ಸಿಒ) ವಿಷಯ ತಜ್ಞರ ಸಮಿತಿಯು (ಎಸ್ಇಸಿ) ಮುಂದಿನ ದಿನಗಳಲ್ಲಿ ಪರಿಶೀಲಿಸಲಿದೆ. ಈವರೆಗೆ ಯಾವ ಅರ್ಜಿಗಳನ್ನೂ ಸಮಿತಿಗೆ ರವಾನಿಸಲಾಗಿಲ್ಲ. ಸಮಿತಿ ಯಾವಾಗ ಸಭೆ ಸೇರುತ್ತದೆ ಎಂಬುದೂ ಗೊತ್ತಿಲ್ಲ’ ಎಂದೂ ಮೂಲಗಳು ಹೇಳಿವೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.