ಮಂಗಳವಾರ, ಜನವರಿ 18, 2022
23 °C

ಓಮೈಕ್ರಾನ್‌ ವಿರುದ್ಧವೂ ಕೋವ್ಯಾಕ್ಸಿನ್ ಪರಿಣಾಮಕಾರಿಯೇ? ಭಾರತ್ ಬಯೋಟೆಕ್‌ ಅಧ್ಯಯನ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ಹೈದರಾಬಾದ್: ಕೊರೊನಾ ವೈರಸ್‌ನ ಹೊಸ ರೂಪಾಂತರ ಓಮೈಕ್ರಾನ್ ವಿರುದ್ಧವೂ ಕೋವ್ಯಾಕ್ಸಿನ್ ಲಸಿಕೆ ಕೆಲಸ ಮಾಡುತ್ತದೆಯೇ ಎಂಬುದನ್ನು ಅಧ್ಯಯನ ನಡೆಸುತ್ತಿರುವುದಾಗಿ ಲಸಿಕೆ ತಯಾರಿಕಾ ಕಂಪನಿ ಭಾರತ್ ಬಯೋಟೆಕ್ ಹೇಳಿದೆ.

ಈಗಾಗಲೇ ಅಸ್ತಿತ್ವದಲ್ಲಿರುವ ಕೋವಿಡ್ ಲಸಿಕೆಗಳು ಓಮೈಕ್ರಾನ್ ವಿರುದ್ಧ ಕಡಿಮೆ ಪರಿಣಾಮಕಾರಿಯಾಗಿರಬಹುದು ಎಂದು ಔಷಧ ತಯಾರಿಕಾ ಕಂಪನಿ ಮೊಡೆರ್ನಾ ಸಿಇಒ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕೋವ್ಯಾಕ್ಸಿನ್ ಪರಿಣಾಮಕಾರಿತ್ವದ ಬಗ್ಗೆ ಅಧ್ಯಯನ ನಡೆಸುತ್ತಿರುವುದಾಗಿ ಭಾರತ್ ಬಯೊಟೆಕ್ ಹೇಳಿದೆ.

ಓದಿ: 

‘ಚೀನಾದ ವುಹಾನ್‌ನಲ್ಲಿ ಮೊದಲು ಪತ್ತೆಯಾಗಿದ್ದ ಕೊರೊನಾ ವೈರಸ್ ತಳಿಯ ವಿರುದ್ಧ ಕೋವ್ಯಾಕ್ಸಿನ್ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿತ್ತು’ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

‘ಆದರೆ, ಕೋವ್ಯಾಕ್ಸಿನ್ ಲಸಿಕೆಯು ಡೆಲ್ಟಾ ಸೇರಿದಂತೆ ಕೊರೊನಾ ವೈರಸ್‌ನ ಇತರ ರೂಪಾಂತರ ತಳಿಗಳ ವಿರುದ್ಧವೂ ಪರಿಣಾಮಕಾರಿಯಾಗಿರುವುದು ಅಧ್ಯಯನಗಳಿಂದ ತಿಳಿದುಬಂದಿತ್ತು. ಹೊಸ ರೂಪಾಂತರಗಳ ಮೇಲೆ ಲಸಿಕೆಯ ಪ್ರಭಾವ ಎಷ್ಟಿದೆ ಎಂಬುದನ್ನು ಅಧ್ಯಯನ ನಡೆಸುತ್ತಿದ್ದೇವೆ’ ಎಂದು ವಕ್ತಾರರು ಹೇಳಿದ್ದಾರೆ.

ಓದಿ: 

ಕೋವ್ಯಾಕ್ಸಿನ್ ಎರಡು ಡೋಸ್‌ಗಳ ಪರಿಣಾಮಕಾರಿತ್ವ ಶೇ 77.8ರಷ್ಟಿದೆ. ಡೆಲ್ಟಾ ರೂಪಾಂತರದ ವಿರುದ್ಧ ಕೋವ್ಯಾಕ್ಸಿನ್‌ ಲಸಿಕೆಯ ಎರಡು ಡೋಸ್‌ಗಳು ಶೇ 50ರಷ್ಟು ಪರಿಣಾಮಕಾರಿ ಎಂದು ‘ದಿ ಲ್ಯಾನ್ಸೆಟ್ ಇನ್‌ಫೆಕ್ಷಿಯಸ್ ಡಿಸೀಸ್ ಜರ್ನಲ್‌’ನಲ್ಲಿ ಇತ್ತೀಚೆಗೆ ಪ್ರಕಟಗೊಂಡಿದ್ದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು