ನವದೆಹಲಿ: ಭಾರತ್ ಬಯೋಟೆಕ್ನ 'ಕೋವ್ಯಾಕ್ಸಿನ್' ಕೋವಿಡ್–19 ಲಸಿಕೆಯನ್ನು ಎರಡು ವರ್ಷ ವಯಸ್ಸಿನಿಂದ 18 ವರ್ಷ ವಯೋಮಾನದವರಲ್ಲಿ ಕ್ಲಿನಿಕಲ್ ಟ್ರಯಲ್ ನಡೆಸಲು ತಜ್ಞರ ಸಮಿತಿಯು ಮಂಗಳವಾರ ಶಿಫಾರಸು ಮಾಡಿದೆ.

ದೆಹಲಿಯ ಏಮ್ಸ್ , ಪಟನಾದ ಏಮ್ಸ್ ಹಾಗೂ ನಾಗ್ಪುರದ ಮೆಡಿಟ್ರಿನಾ ಇನ್ಸ್ಟಿಟ್ಯೂಟ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲಾಗುತ್ತದೆ.

'ಮೂರನೇ ಹಂತದ ಪ್ರಯೋಗಕ್ಕೂ ಮುನ್ನ, ಎರಡನೇ ಹಂತದ ಕ್ಲಿನಿಕಲ್ ಟ್ರಯಲ್ನ ಮಧ್ಯಂತರ ಅಧ್ಯಯನ ವರದಿ (ಸುರಕ್ಷತೆಗೆ ಸಂಬಂಧಿಸಿದ ದತ್ತಾಂಶ) ಜೊತೆಗೆ ಡಿಎಸ್ಎಂಬಿ ಶಿಫಾರಸುಗಳನ್ನು ಸಿಡಿಎಸ್ಸಿಒಗೆ ಸಲ್ಲಿಸಬೇಕು' ಎಂದು ಕೇಂದ್ರ ಔಷಧ ಮತ್ತು ಗುಣಮಟ್ಟ ನಿಯಂತ್ರಣ ಸಂಸ್ಥೆಯ (ಸಿಡಿಎಸ್ಸಿಒ) ಕೋವಿಡ್–19 ತಜ್ಞರ ಸಮಿತಿಯು ಶಿಫಾರಸು ಮಾಡಿರುವುದಾಗಿ ವರದಿಯಾಗಿದೆ. ಎರಡು ವರ್ಷ ವಯಸ್ಸಿನ ಮಕ್ಕಳಿಂದ 18 ವರ್ಷದ ವಯೋಮಾನದವರ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಟ್ರಯಲ್ ನಡೆಸಲು ಭಾರತ್ ಬಯೋಟೆಕ್ ಮನವಿ ಸಲ್ಲಿಸಿತ್ತು.

ಇದನ್ನೂ ಓದಿ– ಭಾರತದ ಕೋವಿಡ್–19 ಮಾದರಿ 44 ರಾಷ್ಟ್ರಗಳಲ್ಲಿ ಪತ್ತೆ: ಡಬ್ಲ್ಯುಎಚ್ಒ

ಫೆಬ್ರುವರಿ 24ರಂದು ಈ ಪ್ರಸ್ತಾವನೆಯ ಬಗ್ಗೆ ಚರ್ಚಿಸಲಾಗಿತ್ತು ಹಾಗೂ ಕ್ಲಿನಿಕಲ್ ಟ್ರಯಲ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಷ್ಕೃತ ವಿವರ ಸಲ್ಲಿಸುವಂತೆ ತಿಳಿಸಲಾಗಿತ್ತು. ಐಸಿಎಂಆರ್ ಮತ್ತು ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೋವ್ಯಾಕ್ಸಿನ್ ಲಸಿಕೆ ಅಭಿವೃದ್ಧಿ ಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.