ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಲಸಿಕೆ ಶೇ 80.6ರಷ್ಟು ಪರಿಣಾಮಕಾರಿ

Last Updated 3 ಮಾರ್ಚ್ 2021, 12:57 IST
ಅಕ್ಷರ ಗಾತ್ರ

ನವದೆಹಲಿ: ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ‘ಕೊವ್ಯಾಕ್ಸಿನ್‌’ ಲಸಿಕೆಯು ಕೊನೆಯ ಹಂತದ ಕ್ಲಿನಿಕಲ್ ಟ್ರಯಲ್‌ನ ಮಧ್ಯಂತರ ವಿಶ್ಲೇಷಣೆ ವೇಳೆ ಶೇ 80.6ರಷ್ಟು ಪರಿಣಾಮಕಾರಿತ್ವ ತೋರಿದೆ ಎಂದು ಭಾರತ್ ಬಯೋಟೆಕ್ ಕಂಪನಿ ತಿಳಿಸಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದಲ್ಲಿ ನಡೆಸಲಾದ ಕ್ಲಿನಿಕಲ್ ಟ್ರಯಲ್‌ನಲ್ಲಿ 25,800 ಮಂದಿ ಭಾಗವಹಿಸಿದ್ದರು. ಈ ಪೈಕಿ 43 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿತ್ತು. ಇದರ ಆಧಾರದಲ್ಲಿ ಮಧ್ಯಂತರ ವಿಶ್ಲೇಷಣೆ ಸಿದ್ಧಪಡಿಸಲಾಗಿದೆ. ಆದರೆ, ಕೋವಿಡ್ ದೃಢಪಟ್ಟ 43 ಮಂದಿಯ ಪೈಕಿ 36 ಜನರನ್ನು ಪ್ರಯೋಗಗಳಿಗಷ್ಟೇ ಬಳಸಿಕೊಳ್ಳಲಾಗಿತ್ತು. 7 ಮಂದಿ ಮಾತ್ರ ಲಸಿಕೆ ಪಡೆದಿದ್ದರು. ಇದರ ಆಧಾರದಲ್ಲಿ ಲಸಿಕೆ ಶೇ 80.6ರಷ್ಟು ಪರಿಣಾಮಕಾರಿ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಕಂಪನಿ ತಿಳಿಸಿದೆ.

ಕೊನೆಯ ಹಂತದ ಕ್ಲಿನಿಕಲ್ ಟ್ರಯಲ್ ನಡೆಯುವುದಕ್ಕೂ ಮುನ್ನವೇ ಜನವರಿಯಲ್ಲಿ ಸರ್ಕಾರವು ‘ಕೊವ್ಯಾಕ್ಸಿನ್‌’ ತುರ್ತು ಬಳಕೆಗೆ ಅನುಮತಿ ನೀಡಿತ್ತು.

ದೇಶದಾದ್ಯಂತ ಕೋವಿಡ್ ವಿರುದ್ಧ ಲಸಿಕೆ ನೀಡಿಕೆ ಅಭಿಯಾನ ಪ್ರಗತಿಯಲ್ಲಿದೆ. ಸೋಮವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಸಹ ‘ಕೊವ್ಯಾಕ್ಸಿನ್‌’ ಲಸಿಕೆ ಹಾಕಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT