ಭಾನುವಾರ, ನವೆಂಬರ್ 27, 2022
26 °C

ಜಾಹೀರಾತು ಮೂಲಕ ‌‌ಹತಾಶೆ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ ಬಿಜೆಪಿ: ಕಾಂಗ್ರೆಸ್‌

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್‌ ನಾಯಕರ ವಿರುದ್ಧ ಪತ್ರಿಕೆಗಳಿಗೆ ಜಾಹೀರಾತು ನೀಡಿರುವ ಬಿಜೆಪಿಯ ಕ್ರಮವನ್ನು ಕಾಂಗ್ರೆಸ್‌ ಖಂಡಿಸಿದೆ. 

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕೆಪಿಸಿಸಿ, ‘ತನ್ನ ಹತಾಶೆ, ಸೋಲು, ನೋವುಗಳನ್ನು ಜಾಹೀರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ ಬಿಜೆಪಿ’ ಎಂದು ಟೀಕಿಸಿದೆ. 

‘ಒಂದೇ ವಾರದಲ್ಲಿ ಎರಡೆರೆಡು ಭಾರಿ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡುತ್ತಿರುವ ಬಿಜೆಪಿಯ ಹತಾಶೆ ಹಿಮಾಲಯದೆತ್ತರಕ್ಕೆ ಏರಿದೆ. ಅದು ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ಬಾಕಿ’ ಎಂದು ವ್ಯಂಗ್ಯವಾಡಿದೆ.

ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರನ್ನು ಗುರಿಯಾಗಿಸಿ ಬಿಜೆಪಿ ಜಾಹೀರಾತು ನೀಡಿದೆ. 

ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೊ ಯಾತ್ರೆಗೆ ಉತ್ತಮ ಜನಸ್ಪಂದನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಿಜೆಪಿ ಪತ್ರಿಕೆಗಳಿಗೆ ಜಾಹೀರಾತು ನೀಡಿದೆ ಎಂದು ಆರೋಪಿಸಲಾಗಿದೆ. 

ಕಾಂಗ್ರೆಸ್‌ ಪಾದಯಾತ್ರೆಯು ಮಂಡ್ಯ ಜಿಲ್ಲೆಯಲ್ಲಿ ಸಾಗುತ್ತಿದೆ. ಈ ವೇಳೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು