ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದೋರ್‌ನಲ್ಲಿ ಭಾರತ್ ಜೋಡೊ ಯಾತ್ರೆಗೆ ಬಾಂಬ್ ಬೆದರಿಕೆ; ತನಿಖೆ

Last Updated 18 ನವೆಂಬರ್ 2022, 9:35 IST
ಅಕ್ಷರ ಗಾತ್ರ

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾರತ್ ಜೋಡೊ ಯಾತ್ರೆಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ದೂರು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.

ಇಂದೋರ್‌ನ ಅಂಗಡಿಯೊಂದಕ್ಕೆ ಬಾಂಬ್ ಬೆದರಿಕೆ ಪತ್ರ ಬಂದಿದೆ. ಈ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಹುಸಿ ಬೆದರಿಕೆ ಎಂದು ಶಂಕಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಇಂದೋರ್‌ನ ಪೊಲೀಸ್ ಆಯುಕ್ತ ಎಚ್.ಸಿ. ಮಿಶ್ರಾ, ನಗರದ ಜುನಿ ಪ್ರದೇಶದಲ್ಲಿ ಸ್ನ್ಯಾಕ್ ಅಂಗಡಿಯೊಂದಕ್ಕೆ ಗುರುವಾರ ಸಂಜೆ ಬೆದರಿಕೆ ಪತ್ರ ಬಂದಿದ್ದು, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸುವವರು ಖಾಲ್ಸಾ ಕ್ರೀಡಾಂಗಣದಲ್ಲಿ ಉಳಿದುಕೊಂಡರೆ ನಗರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದುತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸುವ ಬಗ್ಗೆ ಪತ್ರದಲ್ಲಿ ಉಲ್ಲೇಖವಿಲ್ಲ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT