ಭಾರತ್ ಜೋಡೊ ಯಾತ್ರೆ ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ: ಖರ್ಗೆ

ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೊ ಯಾತ್ರೆಯನ್ನು ಚುನಾವಣೆ ಗೆಲ್ಲುವುದಕ್ಕಾಗಿ ಹಮ್ಮಿಕೊಂಡಿಲ್ಲ. ದೇಶದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಹಬ್ಬಿಸಿರುವ ದ್ವೇಷದ ವಿರುದ್ಧ ಯಾತ್ರೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ್ ಜೋಡೊ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜುಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಪುನಃ ಸ್ಥಾಪಿಸಲು ರಾಹುಲ್ ಬದ್ಧವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಭಾರತ್ ಜೋಡೊ ಯಾತ್ರೆ ಸಮಾರೋಪ ಸಮಾರಂಭ: ರಾಹುಲ್ ಗಾಂಧಿ ಧ್ವಜಾರೋಹಣ
ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ ದ್ವೇಷದ ವಿರುದ್ಧ ಯಾತ್ರೆ ಹಮ್ಮಿಕೊಂಡಿದ್ದೇವೆ. ದೇಶದಲ್ಲಿ ಬಿಜೆಪಿಯು ದ್ವೇಷವನ್ನು ಹರಡುತ್ತಿದೆ. ನಿರುದ್ಯೋಗ, ಹಣದುಬ್ಬರದಂತಹ ಸಮಸ್ಯೆಗಳಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೇಶವನ್ನು ಒಗ್ಗೂಡಿಸಬಹುದು ಎಂಬುದನ್ನು ರಾಹುಲ್ ಗಾಂಧಿ ಸಾಬೀತು ಮಾಡಿದ್ದಾರೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಬಿಜೆಪಿಯವರು ಬಡವರನ್ನು ಮತ್ತಷ್ಟು ಬಡವರನ್ನಾಗಿಸಲು ಮತ್ತು ಶ್ರೀಮಂತರನ್ನು ಇನ್ನಷ್ಟು ಶ್ರೀಮಂತರನ್ನಾಗಿಸಲು ಬಯಸುತ್ತದೆ. ದೇಶದ ಶೇ 72ರಷ್ಟು ಸಂಪತ್ತನ್ನು ಶೇ 10ರಷ್ಟು ಜನರು ಲೂಟಿ ಮಾಡುತ್ತಿದ್ದಾರೆ ಎಂದು ಖರ್ಗೆ ಅವರು ಉಲ್ಲೇಖ ಮಾಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.