ಬುಧವಾರ, ಮಾರ್ಚ್ 22, 2023
32 °C

ನ.20ಕ್ಕೆ ಭಾರತ್‌ ಜೋಡೊ ಯಾತ್ರೆ ಮಧ್ಯಪ್ರದೇಶಕ್ಕೆ ಪ್ರವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶೆಗಾಂವ್, ಮಹಾರಾಷ್ಟ್ರ: ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ನೇತೃತ್ವದ ಭಾರತ್‌ ಜೋಡೊ ಯಾತ್ರೆಯು ಮಹಾರಾಷ್ಟ್ರದಲ್ಲಿ 13ನೇ ದಿನವಾದ ಶನಿವಾರ ಬುಲ್ದಾನಾ ಜಿಲ್ಲೆಯ ಶೆಗಾಂವ್‌ನಲ್ಲಿ ಮುಂದುವರಿಯಿತು.

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಮಹಿಳೆಯರು ಮುಖ್ಯವಾಗಿ ಸ್ವಯಂಸೇವಾ ಸಂಘಗಳ ಸದಸ್ಯರು ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಯಾತ್ರೆಯು ಸಾಗಿದ ಮಾರ್ಗದಲ್ಲಿ ರಾಹುಲ್ ಗಾಂಧಿ ಅವರು ತಮ್ಮೊಂದಿಗೆ ಹೆಜ್ಜೆ ಹಾಕಿದ ಸ್ಥಳೀಯ ನಿವಾಸಿಗಳ ಜೊತೆಗೆ ಚರ್ಚಿಸಿ, ಅವರ ಅಭಿಪ್ರಾಯಗಳನ್ನು ಆಲಿಸಿದರು.

ತೆಲಂಗಾಣದ ಮೂಲಕ ನ.7ರಂದು ಯಾತ್ರೆ ಮಹಾರಾಷ್ಟ್ರ ಪ್ರವೇಶಿಸಿದ್ದು, 14 ದಿನದಲ್ಲಿ 382 ಕಿ.ಮೀ. ಅಂತರವನ್ನು ಕ್ರಮಿಸಿತು. ಯಾತ್ರೆಯು ಬುರ‍್ಹಾನ್‌ಪುರ್ ಗ್ರಾಮದ ಮೂಲಕ ಭಾನುವಾರ ಮಧ್ಯಪ್ರದೇಶವನ್ನು ಪ್ರವೇಶಿಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು