ಶುಕ್ರವಾರ, ಸೆಪ್ಟೆಂಬರ್ 30, 2022
25 °C

ತಮಿಳು ಹುಡುಗಿಯನ್ನೇ ಮದುವೆ ಮಾಡಿಕೊಡಲು ಸಿದ್ಧ: ಮಹಿಳೆ ಮಾತಿಗೆ ನಾಚಿದ ರಾಹುಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಕಾಂಗ್ರೆಸ್‌ನ ‘ಭಾರತ್‌ ಜೋಡೋ ಯಾತ್ರೆ’ ಹಲವು ತಮಾಷೆಯ ಸನ್ನಿವೇಶಗಳಿಗೆ ಸಾಕ್ಷಿಯಾಗುತ್ತಿದೆ.

ತಮಿಳುನಾಡಿನಲ್ಲಿ ಸಂಚರಿಸಿದ ಯಾತ್ರೆಯುದ್ದಕ್ಕೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಜನರೊಂದಿಗೆ ಸಂವಾದ ನಡೆಸುತ್ತಿದ್ದಾರೆ. 

ರಾಹುಲ್ ಅವರು ಮಹಿಳೆಯರ ಗುಂಪಿನೊಂದಿಗೆ ಸಂವಾದ ನಡೆಸುತ್ತಿದ್ದಾಗ ನಡೆದ ತಮಾಷೆಯ ಘಟನೆಯೊಂದನ್ನು  ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಇಂದು ಮಧ್ಯಾಹ್ನ ಮಾರ್ತಾಂಡಮ್‌ನಲ್ಲಿ ಮಹಿಳೆಯರೊಂದಿಗೆ ರಾಹುಲ್ ಗಾಂಧಿ ಸಂವಾದದ ನಡೆಸಿದರು. ಈ ಸಂದರ್ಭದಲ್ಲಿ, ಮಹಿಳೆಯೊಬ್ಬರು ರಾಹುಲ್‌ ಅವರಿಗೆ, ‘ನೀವು ತಮಿಳುನಾಡನ್ನು ಹೆಚ್ಚು ಪ್ರೀತಿಸುತ್ತೀರಿ ಎಂಬುದು ನಮಗೆ ತಿಳಿದಿದೆ. ಆ ಕಾರಣ, ತಮಿಳು ಹುಡುಗಿಯನ್ನೇ ನಿಮಗೆ ಮದುವೆ ಮಾಡಿ ಕೊಡಲು ನಾವು ಸಿದ್ಧರಿದ್ದೇವೆ’ ಎಂದರು. 

ಮಹಿಳೆಯ ಮಾತುಗಳನ್ನು ಆಲಿಸಿದ ರಾಹುಲ್‌ ನಾಚಿಕೊಂಡರು. ಇದನ್ನು ಫೋಟೋದಲ್ಲಿ ಕಾಣಬಹುದು ಎಂದು ರಮೇಶ್‌ ತಿಳಿಸಿದ್ದಾರೆ.  

ಕಾಂಗ್ರೆಸ್‌ನ 'ಭಾರತ್ ಜೋಡೋ ಯಾತ್ರೆ’ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸಲಿದೆ. ಐದು ತಿಂಗಳ ಅವಧಿಯಲ್ಲಿ 3,750 ಕಿ.ಮೀ ದೂರ ಕ್ರಮಿಸಲಿದೆ.  22 ಪ್ರಮುಖ ನಗರಗಳಲ್ಲಿ ಮೆಗಾ ರ‍್ಯಾಲಿ ನಡೆಯಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು