ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಗಳ ನಡುವಿನ ದ್ವೇಷ ಅಂತರ್ಯುದ್ಧಕ್ಕೆ ಕಾರಣವಾಗಬಹುದು: ಅಶೋಕ್‌ ಗೆಹಲೋತ್‌

Last Updated 7 ಸೆಪ್ಟೆಂಬರ್ 2022, 10:07 IST
ಅಕ್ಷರ ಗಾತ್ರ

ಕನ್ಯಾಕುಮಾರಿ: ದೇಶದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಹರಡಲಾಗಿದೆ. ಇದು ಅಂತರ್ಯುದ್ಧಕ್ಕೆ ಕಾರಣವಾಗಬಹುದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಹೇಳಿದ್ದಾರೆ.

‘ಭಾರತ್ ಜೋಡೋ ಯಾತ್ರೆ’ಗೆ ಚಾಲನೆ ನೀಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷರಾಗಬೇಕೆಂಬ ಒಲವನ್ನು ಕಾಂಗ್ರೆಸ್‌ ಪಕ್ಷ ಹೊಂದಿದೆ ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ದೇಶದ ಮುಂದೆ ದೊಡ್ಡ ಸವಾಲುಗಳಿದ್ದು, ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾದರೆ ಅವುಗಳನ್ನು ಎದುರಿಸುವುದು ಸುಲಭವಾಗುತ್ತದೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ದ್ವೇಷ, ಉದ್ವಿಗ್ನತೆ, ಹಿಂಸಾಚಾರ ಎಂಬ ವಾತಾವರಣ ನಿರ್ಮಾಣವಾಗಿರುವುದರಿಂದ ‘ಭಾರತ್ ಜೋಡೋ’ ಘೋಷಣೆಯ ಅಗತ್ಯವಿದೆ ಎಂದಿದ್ದಾರೆ.

‘ಜನರ ನಡುವೆ ಪ್ರೀತಿ, ಸಹೋದರತೆ ಮತ್ತು ಸೌಹಾರ್ದತೆ ಇರಬೇಕಿದೆ. ಹಿಂಸಾಚಾರವನ್ನು ಸಹಿಸಲಾರೆವೆಂಬ ಸಂದೇಶವನ್ನು ನಾವು ರವಾನಿಸಬೇಕಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.

‘ಈಗ ದೇಶದಲ್ಲಿ ಧ್ರುವೀಕರಣವಾಗಿದೆ. ಜಾತಿ ಮತ್ತು ಧರ್ಮಗಳ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲಾಗಿದೆ. ಇದನ್ನು ನಿಯಂತ್ರಿಸಬೇಕಿದೆ. ಇಲ್ಲದೇ ಹೋದರೆ, ದೇಶವು ಅಂತರ್ಯುದ್ಧದತ್ತ ಸಾಗಬಹುದು’ ಎಂದು ಅವರು ಹೇಳಿದರು.

ರಾಹುಲ್ ಗಾಂಧಿಯವರು ಅಹಿಂಸೆಯನ್ನು ನಂಬುತ್ತಾರೆ, ಅವರ ಹೃದಯದಲ್ಲಿ ಯಾವುದೇ ದ್ವೇಷವಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT