ಶುಕ್ರವಾರ, ಡಿಸೆಂಬರ್ 2, 2022
19 °C

ಭಾರತ್ ಜೋಡೊ ಯಾತ್ರೆ ದಿನದಿಂದ ದಿನಕ್ಕೆ ಬಲಗೊಳ್ಳುತ್ತಲೇ ಇದೆ : ಪಿ.ಚಿದಂಬರಂ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೊ ಯಾತ್ರೆ ದಿನದಿಂದ ದಿನಕ್ಕೆ ಬಲಗೊಳ್ಳುತ್ತಲೇ ಇದೆ ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ತಿಳಿಸಿದ್ದಾರೆ. 

ಕರ್ನಾಟಕದಲ್ಲಿ ಸಂಚರಿಸುತ್ತಿರುವ ಯಾತ್ರೆಯಲ್ಲಿ ಪಾಲ್ಗೊಂಡ ಬಳಿಕ ಟ್ವೀಟ್‌ ಮಾಡಿರುವ ಅವರು, ‘ಭಾರತ್ ಜೋಡೊ ಯಾತ್ರೆ ದಿನದಿಂದ ದಿನಕ್ಕೆ ಬಲಗೊಳ್ಳುತ್ತಲೇ ಇದೆ. ನಾನು ರಾಹುಲ್ ಗಾಂಧಿ ಅವರೊಂದಿಗೆ ಮೈಸೂರಿನಿಂದ 5.5 ಕಿ.ಮೀ ಕ್ರಮಿಸಿದೆ. ಮಹಿಳೆಯರು ಮತ್ತು ಯುವಕರ ಸಂಖ್ಯೆ ಜಾಸ್ತಿಯಾಗಿದೆ. ಅಲ್ಲದೆ, ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಜನರು ಹರ್ಷೋದ್ಗಾರ ಮೊಳಗಿಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ. 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಪಾದಯಾತ್ರೆಯು ಸೋಮವಾರ ಶ್ರೀರಂಗಪಟ್ಟಣ ತಾಲ್ಲೂಕು ಕಳಸ್ತವಾಡಿ ಮೂಲಕ ಮಂಡ್ಯ ಜಿಲ್ಲೆ ತಲುಪಿದೆ.

ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ರಾಜ್ಯಕ್ಕೆ ಬರಲಿದ್ದಾರೆ. 

12.30ಕ್ಕೆ ಸೋನಿಯಾ ಗಾಂಧಿ ಮೈಸೂರು ತಲುಪುತ್ತಿದ್ದು  ಸೋನಿಯಾ ಹಾಗೂ ರಾಹುಲ್‌ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ. ನಂತರ ಮಧ್ಯಾಹ್ನ‌ 1 ಗಂಟೆಗೆ ರಾಹುಲ್ ಗಾಂಧಿ ಶ್ರೀರಂಗಪಟ್ಟಣ ತಲುಪಲಿದ್ದಾರೆ.

ಇವನ್ನೂ ಓದಿ...

ಜೋಡೊ ಯಾತ್ರೆ: ‘ಜೋಡಿ’ಸಿದ ರಸ್ತೆ, ವೈಷಮ್ಯ ನಿವಾರಣೆ ಯತ್ನ– ವಿಶೇಷ ವರದಿ

ಯಾತ್ರೆಗೆ ಸಿಗುತ್ತಿರುವ ಸ್ಪಂದನೆ ನೋಡಿ ಬಿಜೆಪಿಯವರಿಗೆ ಭಯ ಬಂದಿದೆ: ಸಿದ್ದರಾಮಯ್ಯ

ನಾವೂ‌ ಪೇಸಿಎಂ ಟಿ-ಶರ್ಟ್ ಧರಿಸಿ ಪಾಲ್ಗೊಳ್ಳುತ್ತೇವೆ, ಏನ್ಮಾಡ್ಕೊತಿರಾ?: ಡಿಕೆಶಿ

ಪೇಸಿಎಂ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಪೊಲೀಸರ ಹಲ್ಲೆ: ಸಿದ್ದರಾಮಯ್ಯ ಆಕ್ರೋಶ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು