ಆಲಪ್ಪುಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ಪ್ರಸಿದ್ಧ ದೋಣಿ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.

ಭಾರತ್ ಜೋಡೊ ಯಾತ್ರೆಯ 12ನೇ ದಿನವಾದ ಸೋಮವಾರ ಆಲಪ್ಪುಳದಿಂದ ಪಾದಯಾತ್ರೆಮುಂದುವರಿಸಲಾಯಿತು.

ಮಧ್ಯಾಹ್ನದ ಬಳಿಕ ಭಾರತ್ ಜೋಡೊ ಯಾತ್ರೆಯ ಭಾಗವಾಗಿ ಪುನ್ನಮಡ ಹಿನ್ನೀರಿನಲ್ಲಿ ವಿಶೇಷ ದೋಣಿ ಪ್ರದರ್ಶನ ಸ್ಪರ್ಧೆ ಏರ್ಪಡಿಸಲಾಯಿತು.

ಇದನ್ನೂ ಓದಿ:ಕಾಂಗ್ರೆಸ್ ಸುಧಾರಣೆ: ಯುವ ಸದಸ್ಯರ ಮನವಿಗೆ ತರೂರ್ ಅನುಮೋದನೆ

ರಾಹುಲ್ ಗಾಂಧಿ ಅವರು ಸ್ಪರ್ಧೆಯಲ್ಲಿ ಭಾಗವಹಿಸಿದ ವಿಡಿಯೊವನ್ನು ಸುದ್ದಿ ಸಂಸ್ಥೆ 'ಎಎನ್ಐ' ಪ್ರಕಟಿಸಿದೆ. ಅಲ್ಲದೆ ಕೇರಳದಲ್ಲಿ ಭಾರತ್ ಜೋಡೊ ಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ವರದಿಯಾಗಿದೆ.

ಕೇರಳದಲ್ಲಿ ಓಣಂ ಹಬ್ಬದ ಪ್ರಯುಕ್ತ ವರ್ಷಂಪ್ರತಿ ನೆಹರೂ ಟ್ರೋಫಿ ದೋಣಿ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತದೆ. ಈ ಬಾರಿಯ ಸ್ಪರ್ಧೆ ತಿಂಗಳಾರಂಭದಲ್ಲಿ ಆಯೋಜನೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.