ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರ್ಯಾಕ್ಟರ್ ಚಾಲಕರು ಅವಿದ್ಯಾವಂತರು, ದೆಹಲಿ ಮಾರ್ಗ ಗೊತ್ತಿರಲಿಲ್ಲ: ಟಿಕಾಯತ್

Last Updated 27 ಜನವರಿ 2021, 10:00 IST
ಅಕ್ಷರ ಗಾತ್ರ

ನವದೆಹಲಿ: ಅವಿದ್ಯಾವಂತ ಜನ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದರು. ಅವರಿಗೆ ದೆಹಲಿಯ ದಾರಿ ಗೊತ್ತಿರಲಿಲ್ಲ ಎಂದು ಭಾರತ್ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಗಣರಾಜ್ಯೋತ್ಸವ ದಿನ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ದೆಹಲಿಯಲ್ಲಿ ರೈತರು ಕೆಂಪುಕೋಟೆಗೆ ನುಗ್ಗಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಟ್ರ್ಯಾಕ್ಟರ್ ಚಲಾಯಿಸುತ್ತಿದ್ದವರು ಅವಿದ್ಯಾವಂತರಾಗಿದ್ದು, ಅವರಿಗೆ ದೆಹಲಿಯ ದಾರಿ ಗೊತ್ತಿರಲಿಲ್ಲ. ಆಡಳಿತವು ಅವರಿಗೆ ದೆಹಲಿಯ ದಾರಿ ತೋರಿಸಿತ್ತು. ಅದರಂತೆ ಅವರು ದೆಹಲಿಗೆ ತೆರಳಿ ಮನೆಗಳಿಗೆ ವಾಪಸಾಗಿದ್ದಾರೆ. ಅವರಲ್ಲಿ ಕೆಲವರು ಹಾದಿ ತಿಳಿಯದೆ ಕೆಂಪುಕೋಟೆಯತ್ತ ತೆರಳಿದ್ದಾರೆ. ಪೊಲೀಸರು ಅವರಿಗೆ ಹಿಂತಿರುಗುವಂತೆ ಮಾರ್ಗದರ್ಶನ ನೀಡಿದ್ದರು’ ಎಂದು ಹೇಳಿದ್ದಾರೆ.

ಮಂಗಳವಾರ ನಡೆದ ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಕೆಂಪುಕೋಟೆ ಆವರಣಕ್ಕೆ ನುಗ್ಗಿದ ನೂರಾರು ಪ್ರತಿಭಟನಕಾರರು ಐತಿಹಾಸಿಕ ಕೆಂಪು ಕೋಟೆಯಲ್ಲಿ ಧಾರ್ಮಿಕ ಧ್ವಜವನ್ನೂ ಹಾರಿಸಿದ್ದರು. ರೈತರ ಒಂದು ಗುಂಪು ದೆಹಲಿಯ ಬೀದಿಗಳಲ್ಲಿ ದಾಂದಲೆ ನಡೆಸಿತ್ತು. ಬ್ಯಾರಿಕೇಡ್‌ಗಳನ್ನು ಕಿತ್ತು ಒಗೆದು ಪೊಲೀಸರ ಮೇಲೂ ಹಲ್ಲೆ ಮಾಡಿತ್ತು. ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ, ಹಿಂಸಾಚಾರದಲ್ಲಿ 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದು, ಈವರೆಗೆ 22 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT