ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಪ್ರಕರಣ: ಭಾರತಿ ಸಿಂಗ್ ದಂಪತಿಗೆ ಡಿ.4ರವರೆಗೆ ನ್ಯಾಯಾಂಗ ಬಂಧನ

ಮುಂಬೈನ ಹಾಸ್ಯನಟಿ ಮನೆಯಲ್ಲಿ ಮಾದಕ ವಸ್ತು ಪತ್ತೆ
Last Updated 22 ನವೆಂಬರ್ 2020, 12:26 IST
ಅಕ್ಷರ ಗಾತ್ರ

ಮುಂಬೈ: ಮನೆಯಲ್ಲಿ ಮಾದಕ ವಸ್ತು ಹೊಂದಿದ್ದ ಆರೋಪದ ಮೇರೆಗೆ ಹಾಸ್ಯನಟಿ ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಮಾದಕವಸ್ತು ನಿಯಂತ್ರಣ ಬ್ಯೂರೊ (ಎನ್‌ಸಿಬಿ) ಬಂಧಿಸಿದ್ದು, ಇಬ್ಬರಿಗೂ ಡಿ. 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲು ಮುಂಬೈ ಹೈಕೋರ್ಟ್ ಭಾನುವಾರ ನಿರ್ದೇಶನ ನೀಡಿದೆ.

ಇವರಿಬ್ಬರ ಜಾಮೀನು ಅರ್ಜಿಯನ್ನು ಸೋಮವಾರ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ.

ಮುಂಬೈನ ಅಂಧೇರಿಯಲ್ಲಿರುವ ಭಾರತಿ ಸಿಂಗ್ ಅವರ ಮನೆ ಮೇಲೆ ಶನಿವಾರ ದಾಳಿ ಮಾಡಿದ್ದ ಎನ್‌ಸಿಬಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿತ್ತು. ಈ ಸಂಬಂಧ ಭಾರತಿ ಹಾಗೂ ಅವರ ಪತಿ ಹರ್ಷ್‌ ಅವರನ್ನು ಬಂಧಿಸಲಾಗಿದ್ದು, ಭಾನುವಾರ ಮಧ್ಯಾಹ್ನ ದಂಪತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಭಾರತಿ ಹಾಗೂ ಹರ್ಷ್ ಇಬ್ಬರೂ ಮಾದಕವಸ್ತು ಸೇವನೆ ಮಾಡುತ್ತಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ಜಾಲದ ಜಾಡು ಹಿಡಿದಿರುವ ಎನ್‌ಸಿಬಿ, ಬಾಲಿವುಡ್‌ನ ಕೆಲ ನಟ–ನಟಿಯರು, ಕಿರುತೆರೆ ಕಲಾವಿದರ ಕುರಿತು ತನಿಖೆ ತೀವ್ರಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT