ಶನಿವಾರ, ಜುಲೈ 2, 2022
20 °C

ಪಶ್ಚಿಮ ಬಂಗಾಳ ಉಪಚುನಾವಣೆ: ಭವಾನಿಪುರದಲ್ಲಿ ಶೇ 21.57ರಷ್ಟು ಮತದಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗುರುವಾರ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಬೆಳಿಗ್ಗೆ 11 ಗಂಟೆಯ ವೇಳೆಗೆ ಶೇ 21.57ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಇದೇ ವೇಳೆ ಸಂಶೇರ್‌ಗಂಜ್‌ ಮತ್ತು ಜಂಗಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾನ ಆರಂಭವಾಗಿ ಎರಡು ಗಂಟೆಗಳ ನಂತರ, ಕ್ರಮವಾಗಿ ಶೇ 40.23 ಮತ್ತು ಶೇ 36.11ರಷ್ಟು ಮತದಾನವಾಗಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ. ತೀವ್ರ ಬಿಗಿ ಭದ್ರತೆಯೊಂದಿಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಯಿತು. ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.

ಒಡಿಶಾ​ ವರದಿ: ಒಡಿಶಾ ರಾಜ್ಯದ ಪುರಿ ಜಿಲ್ಲೆಯ ಪಿಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ನಡೆಯುತ್ತಿರುವ ಉಪಚುನಾವಣೆ ಯಲ್ಲಿ ಬೆಳಿಗ್ಗೆ 9 ಗಂಟೆ ಹೊತ್ತಿಗೆ ಶೇ 7.8ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬೆಳಿಗ್ಗೆ 7 ಗಂಟೆ ಮತದಾನ ಆರಂಭವಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಮತದಾರರು ಮತಗಟ್ಟೆಗಳ ಎದುರು ಗುರುತು ಹಾಕಿರುವ ಸ್ಥಳಗಳಲ್ಲಿ ವ್ಯಕ್ತಿಗತ ಅಂತರಗಳೊಂದಿಗೆ ಸಾಲಾಗಿ ನಿಂತು ಮತ ಚಲಾಯಿಸುತ್ತಿದ್ದಾರೆ. ಸಂಜೆ 6 ರವರೆಗೆ ಮತದಾನ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು