ಮುಂಬೈ: ಭೋಜಪುರಿ ಚಲನಚಿತ್ರ ನಟಿ ಅನುಪಮಾ ಪಾಠಕ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆಗಸ್ಟ್ 2ರಂದೇ ಈ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ನಗರದ ಮಹದಾ ಕಾಲೋನಿಯ ಬಾಡಿಗೆ ಫ್ಲ್ಯಾಟ್‌ನಲ್ಲಿ ಪಾಠಕ್ (40) ವಾಸಿಸುತ್ತಿದ್ದರು. ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅವರ ದೇಹ ಪತ್ತೆಯಾಗಿದೆ. ಪಾಠಕ್ ಅವರ ಸಾವಿನ ಅನುಮಾನದ ಕುರಿತು ತನಿಖೆ ನಡೆಯುತ್ತಿದ್ದು, ಸೆಕ್ಷನ್ 306ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬಿಹಾರ ಪುರ್ನಿಯಾ ಜಿಲ್ಲೆಯ ಪಾಠಕ್, ಮುಂಬೈನಲ್ಲಿ ನೆಲೆಸಿದ್ದರು. ಭೋಜಪುರಿ ಚಲನಚಿತ್ರಗಳು ಮತ್ತು ಟಿ.ವಿ. ಕಾರ್ಯಕ್ರಮಗಳಲ್ಲಿ ನಟಿಸಿದ್ದರು.

‘ನನ್ನನ್ನು ವಂಚಿಸಲಾಗಿದೆ. ಇನ್ನು ಮುಂದೆ ಯಾವುದೇ ವ್ಯಕ್ತಿಯ ಮೇಲೆ ವಿಶ್ವಾಸವಿಡುವುದಿಲ್ಲ. ನನಗೆ ಸಹಾಯ ಮಾಡುವ ಸ್ನೇಹಿತರು ಯಾರೂ ಇಲ್ಲ’ ಎಂದು ಸಾವಿಗೀಡಾಗುವ ಹಿಂದಿನ ದಿನ ವಿಡಿಯೊ ಮಾಡಿದ್ದ ಪಾಠಕ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು.

ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿದ್ದ ಪತ್ರ ದೊರೆತಿದೆ. ಪಾಠಕ್ ಬಳಿ ಹಣ ಇರಲಿಲ್ಲ. ಲಾಕ್‌ಡೌನ್‌ನಿಂದಾಗಿ ಕೆಲಸವೂ ಇರಲಿಲ್ಲ. ಜತೆಗೆ, ಅವರ ಸ್ನೇಹಿತರೊಬ್ಬರು ದ್ವಿಚಕ್ರ ವಾಹನವನ್ನು ಹಿಂತಿರುಗಿಸದೆ ವಂಚಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.