ಅಹಮದಾಬಾದ್: ಗುಜರಾತ್‌ನ ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಗುರುವಾರ ಮಧ್ಯಾಹ್ನ 1.30ಕ್ಕೆ ಗಾಂಧಿನಗರದ ರಾಜಭವನದಲ್ಲಿ ನಡೆಯಲಿದೆ.

ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇದ್ದು, ಈ ಸಮಯದಲ್ಲಿ ಬಿಜೆಪಿ ನೂತನ ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಿಜೆಪಿಯ ‘ಪುನರಾವರ್ತನೆ ಇಲ್ಲ‘ ಎಂಬ ಸೂತ್ರದ ಹಿನ್ನೆಲೆಯಲ್ಲಿ, ನೂತನ ಸಚಿವರ ಹೆಸರನ್ನು ಗೌಪ್ಯವಾಗಿಡಲಾಗಿದ್ದು, ಯಾರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂಬುದನ್ನು ಘೋಷಿಸಿಲ್ಲ.

ಇದಕ್ಕೂ ಮುನ್ನ ಬಿಜೆಪಿ, ಬುಧವಾರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಿಸಿತ್ತು. ಈ ಸಂಬಂಧ ರಾಜಭವನದಲ್ಲಿ ಸಿದ್ಧತೆ ನಡೆದಿತ್ತು. ಆದರೆ, ದಿಢೀರನೆ ಕಾರ್ಯಕ್ರಮದಲ್ಲಿ ಬದಲಾವಣೆಯಾದ್ದರಿಂದ, ಸಮಾರಂಭಕ್ಕಾಗಿ ಕಟ್ಟಿದ್ದ ಬ್ಯಾನರ್‌ಗಳನ್ನು ತೆಗೆಯಲಾಗಿತ್ತು.

ನಂತರ, ಬುಧವಾರ ಸಂಜೆ ಮುಖ್ಯಮಂತ್ರಿ ಕಚೇರಿಯಿಂದ ‘ಹೊಸ ಸಚಿವರ ಪ್ರಮಾಣ ವಚನ ಸಮಾರಂಭ ಗುರುವಾರ ಮಧ್ಯಾಹ್ನ 1.30ಕ್ಕೆ ರಾಜಧಾನಿ ಗಾಂಧಿನಗರದಲ್ಲಿರುವ ರಾಜಭವನದಲ್ಲಿ ನಡೆಯಲಿದೆ‘ ಎಂಬ ಪ್ರಕಟಣೆ ಹೊರಬಿತ್ತು.

ತಾಲಿಬಾನ್ಗೆ ಕಾಲಾವಕಾಶ ನೀಡಬೇಕು, ಅವರನ್ನು ನಿಯಂತ್ರಿಸಲು ಸಾಧ್ಯವಿಲ್ಲ: ಇಮ್ರಾನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.