ಗುರುವಾರ , ಜನವರಿ 20, 2022
15 °C

ಉತ್ತರ ಪ್ರದೇಶ ಚುನಾವಣೆ: ಸೋನಿಯಾ ಭೇಟಿಯಾಗಲಿದ್ದಾರೆ ಭೂಪೇಶ್‌ ಬಘೆಲ್‌

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್‌ ಬಘೆಲ್‌ ಮತ್ತು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಇಂದು (ಶುಕ್ರವಾರ) ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಘೆಲ್ ಅವರು ಆಂತರಿಕ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಪೈಲಟ್ ಅವರು ರಾಜ್ಯದಲ್ಲಿ ಕೆಲವು ಬದಲಾವಣೆ ಬಯಸಿ ಅಧ್ಯಕ್ಷೆ ಜತೆ ಮಾತುಕತೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ ವೀಕ್ಷಕರಾಗಿರುವ ಕಾರಣ, ಚುನಾವಣೆ ಕುರಿತು ಚರ್ಚಿಸಲು ಬಘೆಲ್ ಅವರು ಪಕ್ಷದ ಅಧ್ಯಕ್ಷೆ ಅವರನ್ನು ಭೇಟಿಯಾಗುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಓದಿ: ಸಂಪುಟ ಪುನರ್‌ರಚನೆ ಸಾಧ್ಯತೆ: ಪ್ರಿಯಾಂಕಾ ಭೇಟಿ ಮಾಡಿದ ಸಿಎಂ ಗೆಹಲೋತ್

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಗುರುವಾರ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ರಾಜಸ್ಥಾನ ಸಚಿವ ಸಂಪುಟ ಪುನರ್‌ರಚನೆ ಮಾಡುವ ಸಾಧ್ಯತೆಗಳಿದ್ದು, ಇದೇ ಕಾರಣಕ್ಕೆ ಗೆಹಲೋತ್ ಅವರು ಪಕ್ಷದ ವರಿಷ್ಠರನ್ನು ಭೇಟಿಮಾಡಿದ್ದಾರೆ ಎನ್ನಲಾಗಿತ್ತು. ಇದರ ಬೆನ್ನಲ್ಲೇ ಪೈಲಟ್ ಅವರೂ ಸೋನಿಯಾ ಭೇಟಿಗೆ ಮುಂದಾಗಿದ್ದಾರೆ.

ಪೈಲಟ್ ಅವರು ಗುರುವಾರ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದರು.

ಸೋನಿಯಾ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿದ್ದ ಗೆಹಲೋತ್, ಎಲ್ಲ ವಿಚಾರಗಳನ್ನೂ ಅಧ್ಯಕ್ಷರಿಗೆ ತಿಳಿಸಿದ್ದೇನೆ. ಪಕ್ಷದ ನಾಯಕತ್ವ ತೆಗೆದುಕೊಳ್ಳುವ ನಿರ್ಧಾರಗಳಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು