ಮಂಗಳವಾರ, ಅಕ್ಟೋಬರ್ 20, 2020
21 °C

ನ್ಯಾಯಾಂಗ ನಿಂದನೆ; ತೀರ್ಪು ಪ್ರಶ್ನಿಸಿ ಪ್ರಶಾಂತ್ ಭೂಷಣ್ ಮರುಪರಿಶೀಲನಾ ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ತಮ್ಮ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆಗಸ್ಟ್ 31ರಂದು ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ವಕೀಲ ಪ್ರಶಾಂತ್ ಭೂಷಣ್ ಅವರು ಸುಪ್ರಿಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. 

ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯ ಅನ್ವಯ ಸೆಪ್ಟೆಂಬರ್ 14ರಂದು ₹1 ದಂಡ ಪಾವತಿಸಿದ್ದ ಪ್ರಶಾಂತ್ ಭೂಷಣ್, ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳಲ್ಲಿ ಒಂದು ಅರ್ಜಿ ನ್ಯಾಯಾಂಗ ನಿಂದನೆ ಪ್ರಕರಣದ ವಿರುದ್ಧ ಆಗಸ್ಟ್‌ 14ರಂದು ನೀಡಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದೆ. ಇನ್ನೊಂದು ಆಗಸ್ಟ್‌ 31ರಂದು ನೀಡಿದ ಶಿಕ್ಷೆ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯಾಗಿದೆ.

ವಕೀಲರಾದ ಕಾಮಿನಿ ಜೈಸ್ವಾಲ್ ಅವರ ಮೂಲಕ ಸಲ್ಲಿಸಲಾದ ಎರಡನೇ ಪರಿಶೀಲನಾ ಅರ್ಜಿಯಲ್ಲಿ ಭೂಷಣ್ ಅವರು,  ಈ ವಿಷಯದ ಬಗ್ಗೆ ಮುಕ್ತ ನ್ಯಾಯಾಲಯದಲ್ಲಿ ಮೌಖಿಕ ವಿಚಾರಣೆ ನಡೆಸಬೇಕೆಂದು ಕೋರಿದ್ದಾರೆ.  ಈಗ ನೀಡಿರುವ ಆಕ್ಷೇಪಾರ್ಹ ತೀರ್ಪುನ್ನು ಉಲ್ಲೇಖಿಸಿರುವ ಅವರು, ಹೊಸದಾಗಿ ವಿಚಾರಣೆ ನಡೆಸುವಂತೆ ಮರುಪರಿಶೀಲನಾ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿಯಲ್ಲಿ ಎತ್ತಿರುವ ಪ್ರಶ್ನೆಗಳ ವಿಚಾರಣೆ ನಡೆಸಲು ದೊಡ್ಡ ಪೀಠಕ್ಕೆ ವರ್ಗಾಯಿಸಬೇಕು ಎಂದು ಕೋರಿದ್ದಾರೆ.

 ‌

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು