ಮಂಗಳವಾರ, ನವೆಂಬರ್ 24, 2020
19 °C

ಅಮೆರಿಕ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುವ ದೇಶ ಬೆಲೆ ತೆರಬೇಕಾಗುತ್ತದೆ: ಬೈಡನ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ‘ಅಮೆರಿಕದ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ದೇಶದ ಹಸ್ತಕ್ಷೇಪ ಸಹಿಸುವುದಿಲ್ಲ. ಹಾಗೆ ಮಾಡಿದ್ದು ಕಂಡುಬಂದಲ್ಲಿ ನಾನು ಗೆದ್ದ ನಂತರ ಅಂಥ ದೇಶ ಭಾರಿ ಬೆಲೆ ತೆರಬೇಕಾಗುತ್ತದೆ’ ಎಂದು ಡೆಮಾಕ್ರಟಿಕ್ ಅಭ್ಯರ್ಥಿ ಜೊ ಬೈಡನ್‌ ಎಚ್ಚರಿಸಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಚೀನಾ, ರಷ್ಯಾ ಹಾಗೂ ಇರಾನ್‌ ಹಸ್ತಕ್ಷೇಪ ಮಾಡುತ್ತಿವೆ ಎಂಬ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬೈಡನ್‌ ಇಂಥ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ನಾಶ್‌ವಿಲ್ಲೆಯ ಬೆಲ್‌ಮಾಂಟ್‌ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಗಳ ನಡುವಿನ ಕೊನೆಯ ಸಂವಾದದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಷ್ಯಾ, ಇರಾನ್‌ ಈ ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಯತ್ನಿಸುತ್ತಿವೆ ಎಂಬುದಾಗಿ ಗುಪ್ತಚರ ಇಲಾಖೆ ವರದಿಗಳ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ, ‘ಅವರು ಅಮೆರಿಕದ ಸಾರ್ವಭೌಮತೆಯಲ್ಲಿ ಮೂಗುತೂರಿಸುವ ಯತ್ನ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದರು.

ರಿಪಬ್ಲಿಕನ್‌ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ ಪರ ಮತ ಚಲಾಯಿಸುವ ರಾಜ್ಯಗಳಲ್ಲಿನ ಮತದಾರರಿಗೆ ಇರಾನ್‌ ಇ–ಮೇಲ್‌ ಮೂಲಕ ಬೆದರಿಕವೊಡ್ಡುತ್ತಿದೆ ಎಂದೂ ಗುಪ್ತಚರ ಇಲಾಖೆ ಅಧಿಕಾರಿಗಳು ಆರೋಪಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು