ಬುಧವಾರ, ಮಾರ್ಚ್ 22, 2023
21 °C

ಗಡ್ಕರಿ, ಫಡಣವೀಸ್‌ ತವರಿನಲ್ಲಿ ಬಿಜೆಪಿಗೆ ಮುಖಭಂಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದ ನಾಗ್ಪುರ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಮಹಾ ವಿಕಾಸ್‌ ಆಘಾಡಿ (ಎಂವಿಎ) ಮೈತ್ರಿಯ ಅಭ್ಯರ್ಥಿ ಸುಧಾಕರ್‌ ಆಡಬಾಲೆ ಗುರುವಾರ ಗೆಲುವು ಸಾಧಿಸಿದ್ದು, ಬಿಜೆಪಿಗೆ ಮುಖಭಂಗವಾಗಿದೆ.

ಬಿಜೆಪಿಯ ಸಿದ್ಧಾಂತದ ಪೋಷಕ ಸಂಘಟನೆ ಆರೆಸ್ಸೆಸ್‌ ಪ್ರಧಾನ ಕಚೇರಿ ಹೊಂದಿರುವ, ಕೇಂದ್ರ ಸಚಿವ ನಿತಿನ್‌ ಗಡ್ಕರಿ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರಂಥ ಘಟಾನುಘಟಿಗಳ ತವರು ನೆಲದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನಾಗೋ ಗಾಣಾರ್‌ ಅವರಿಗೆ ಸೋಲುಂಟಾಗಿದೆ. ಇದು ಪಕ್ಷಕ್ಕೆ ಆಗಿರುವ ಬಹುದೊಡ್ಡ ಹಿನ್ನಡೆ ಎಂದು ವಿಶ್ಲೇಷಿಸಲಾಗುತ್ತಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು