ಶನಿವಾರ, ಜುಲೈ 2, 2022
20 °C

ಶೀಘ್ರದಲ್ಲೇ ಅತಿ ದೊಡ್ಡ ನಿರ್ಧಾರ: ಕುತೂಹಲ ಮೂಡಿಸಿದ ಪಂಜಾಬ್‌ ಸಿಎಂ ಪೋಸ್ಟ್‌

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಪಂಜಾಬ್‌ನ ಇತಿಹಾಸದಲ್ಲೇ ಅತಿದೊಡ್ಡ ನಿರ್ಧಾರವನ್ನು ತಾವು ಕೈಗೊಳ್ಳುತ್ತಿರುವುದಾಗಿ ಮುಖ್ಯಮಂತ್ರಿ ಭಗವಂತ್‌ ಮಾನ್‌ ಗುರುವಾರ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಕೂ’ದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಪಂಜಾಬ್‌ನ ಹಿತದೃಷ್ಟಿಯಿಂದ ಇಂದು ಬಹಳ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಪಂಜಾಬ್ ಇತಿಹಾಸದಲ್ಲೇ ಈ ವರೆಗೆ ಯಾರೂ ಇಂಥ ನಿರ್ಧಾರ ತೆಗೆದುಕೊಂಡಿರಲಾರರು. ಶೀಘ್ರದಲ್ಲೇ ಅದನ್ನು ಘೋಷಿಸುತ್ತೇನೆ’ ಎಂದು ಹೇಳಿ ಕುತೂಹಲ ಮೂಡಿಸಿದ್ದಾರೆ.

ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಭಗವಂತ ಮಾನ್ ಅವರು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಊರು ಖಟಕಡ್ ಕಲಂನಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು