ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Updates: 2,95,041 ಹೊಸ ಪ್ರಕರಣ, 2,023 ಮಂದಿ ಸಾವು

Last Updated 21 ಏಪ್ರಿಲ್ 2021, 7:06 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 2,95,041 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,56,16,130ಕ್ಕೆ ಏರಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 21,57,538 ರಷ್ಟಾಗಿದೆಎಂದು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ.

ಇದೇ ಅವಧಿಯಲ್ಲಿ ಕೊರೊನಾದಿಂದ ದೇಶದಲ್ಲಿ 2,023 ಮಂದಿ ಮೃತಪಟ್ಟಿದ್ದು, ಈವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆ 1,82,553ಕ್ಕೆ ಏರಿದೆ.

ಸತತ 42 ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸದ್ಯ, ದೇಶದಾದ್ಯಂತ ಈವರೆಗೆ ಕೋವಿಡ್‌ನಿಂದ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1,32,76,039 ಕ್ಕೆ ಏರಿದೆ. ಸೋಂಕಿತರ ಸಾವಿನ ಪ್ರಮಾಣ ಶೇ. 1.18 ರಷ್ಟಾಗಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 6,85,552 ಸಕ್ರಿಯ ಪ್ರಕರಣಗಳಿವೆ. ಕೇರಳ 1,18,996, ಕರ್ನಾಟಕ 1,59,177, ತಮಿಳುನಾಡಿನಲ್ಲಿ 79,804 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT