ಗುರುವಾರ , ನವೆಂಬರ್ 26, 2020
19 °C

ನಿಗದಿತ ಸಮಯಕ್ಕೆ ಬಿಹಾರ ವಿಧಾನಸಭೆ ಚುನಾವಣೆ: ಚುನಾವಣಾ ಆಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ನಿಗದಿತ ಸಮಯಕ್ಕೆ ನಡೆಯಲಿವೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

243 ಸದಸ್ಯರನ್ನೊಳಗೊಂಡ ಬಿಹಾರ ವಿಧಾನಸಭೆಯ ಅವಧಿ ನವೆಂಬರ್‌ 29ಕ್ಕೆ ಕೊನೆಗೊಳ್ಳಲಿದೆ. ಹೀಗಾಗಿ, ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ ಎಂದು ಆಯೋಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋವಿಡ್‌–19 ಸಾಂಕ್ರಾಮಿಕ ಕಾಯಿಲೆ ಕಾರಣಕ್ಕೆ ಚುನಾವಣೆಯನ್ನು ಮುಂದೂಡುವಂತೆ ಕೆಲವು ರಾಜಕೀಯ ಪಕ್ಷಗಳು ಒತ್ತಾಯಿಸಿವೆ.

ಇಂತಹ ಸಂಕಷ್ಟದ ಸಮಯದಲ್ಲಿ ಚುನಾವಣೆ ನಡೆಸುವ ಅಗತ್ಯವೇನಿದೆ ಎಂದು ರಾಷ್ಟ್ರೀಯ ಜನತಾ ದಳ ಪ್ರಶ್ನಿಸಿದೆ. ಎನ್‌ಡಿಎ ಮೈತ್ರಿಕೂಟದ ಲೋಕ್‌ ಜನಶಕ್ತಿ ಪಕ್ಷವು ಸಹ  ಚುನಾವಣೆಯನ್ನು ಮುಂದೂಡುವಂತೆ ಆಗ್ರಹಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು