ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಚುನಾವಣೆ ಮತ ಎಣಿಕೆ: ಆರಂಭದಿಂದಲೇ ಮಹಾಘಟಬಂಧನ್ ಮುನ್ನಡೆ

Last Updated 10 ನವೆಂಬರ್ 2020, 3:08 IST
ಅಕ್ಷರ ಗಾತ್ರ

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದ್ದು, ಅಂಚೆ ಮತ ಎಣಿಕೆಯು ಕ್ಷಣಕ್ಷಣಕ್ಕೂ ಚುರುಕಿನ ತಿರುವು ಪಡೆದುಕೊಳ್ಳುತ್ತಿದೆ.

ಜೆಡಿಯು ನಿರಾಸ ಪ್ರದರ್ಶನ ನೀಡುತ್ತಿದ್ದರೆ, ಆರ್‌ಜಿಡಿ ಮತ್ತು ಬಿಜೆಪಿ ನಡುವೆ ಮುನ್ನಡೆಯ ಹೊಯ್ದಾಟ ಕಾಣಿಸಿಕೊಳ್ಳುತ್ತಿದೆ.

ಮುಂಜಾನೆ 8.27ರ ಅವಧಿಯಲ್ಲಿ ಬಿಜೆಪಿ 22, ಆರ್‌ಜೆಡಿ 21, ಜೆಡಿಯು 6, ಕಾಂಗ್ರೆಸ್ 7, ಸಿಪಿಐ (ಎಂಎಲ್) 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 28ರಲ್ಲಿ, ಮಹಾಘಟಬಂಧನ್ ಅಭ್ಯರ್ಥಿಗಳು 32 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಬಿಹಾರದಲ್ಲಿ ಸತತ ಮೂರು ಅವಧಿಗೆ ನಿತೀಶ್‌ ಕುಮಾರ್‌ ಅವರು ಮುಖ್ಯಮಂತ್ರಿಯಾಗಿದ್ದರು. ಅದರಲ್ಲಿ ಹೆಚ್ಚಿನ ಅವಧಿ ಅವರು ಎನ್‌ಡಿಎಯ ಭಾಗವಾಗಿಯೇ ಇದ್ದರು. ಈ ಬಾರಿ ಎನ್‌ಡಿಎಗೆ ಆರ್‌ಜೆಡಿ ನೇತೃತ್ವದ ಮಹಾಘಟಬಂಧನ ಭಾರಿ ಪೈಪೋಟಿ ನೀಡಿದೆ. ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಮತಗಟ್ಟೆ ಸಮೀಕ್ಷೆಗಳಲ್ಲಿ ಹೆಚ್ಚಿನವು ಈಗಾಗಲೇ ಅಂದಾಜಿಸಿವೆ. ಹಾಗಾಗಿ, ಈ ಫಲಿತಾಂಶ ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT