ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಬಂದ್: ಪ್ರತಿಭಟನಾಕಾರರಿಂದ ರಸ್ತೆ ತಡೆ, ಟೈರ್‌ಗೆ ಬೆಂಕಿ

Last Updated 28 ಜನವರಿ 2022, 6:41 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದಲ್ಲಿ ರೈಲ್ವೆ ನೇಮಕಾತಿ ಮಂಡಳಿಯ(ಆರ್‌ಆರ್‌ಬಿ) ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ (ಎನ್‌ಟಿಪಿಸಿ)ನೇಮಕಾಕಿಪ್ರಕ್ರಿಯೆಯಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆಉದ್ಯೋಗಾಕಾಂಕ್ಷಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳು ಶುಕ್ರವಾರ ಕರೆ ನೀಡಿರುವ ಬಂದ್‌ಗೆ ವ್ಯಾಪಕ ಬೆಂಬಲ ದೊರಕಿದೆ.

ಬಂದ್‌ಗೆ ಬೆಂಬಲ ಸೂಚಿಸಿ ಪ್ರತಿಭಟನಾಕಾರರು ಪಾಟ್ನಾ ಸೇರಿದಂತೆ ಹಲವೆಡೆ ರಸ್ತೆ ತಡೆ ನಡೆಸಿದರು. ಇನ್ನು ಕೆಲವು ಪ್ರದೇಶಗಳಲ್ಲಿ ಟೈರ್‌ಗೆ ಬೆಂಕಿ ಹಚ್ಚಲಾಯಿತು.

ರಾಮಶಿಶ್ ಚೌಕ್‌ನಲ್ಲಿ ಆರ್‌ಜೆಡಿ ಶಾಸಕ ಡಾ. ಮುಖೇಶ್ ರೋಶನ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಆರ್‌ಆರ್‌ಬಿ ಎನ್‌ಟಿಪಿಸಿ ಹುದ್ದೆಗಳ ಭರ್ತಿಗಾಗಿ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆ ವಿರೋಧಿಸಿ ಹಲವೆಡೆ ಉದ್ಯೋಗಾಕಾಂಕ್ಷಿಗಳು ಬುಧವಾರ ನಡೆಸಿದ ಪ್ರತಿಭಟನೆಯು ಹಿಂಸಾರೂಪಕ್ಕೆ ತಿರುಗಿತ್ತು. ಪ್ರಯಾಣಿಕ ರೈಲಿಗೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದರು. ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗಿಸಿದ್ದರು.

ಪೊಲೀಸರು ದಾಖಲಿಸಿರುವ ಪ್ರಕರಣ ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT