ಪಟ್ನಾ: ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಸಂಭವಿಸಿದ ಇಟ್ಟಿಗೆ ಕಾರ್ಖಾನೆ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಇಟ್ಟಿಗೆ ಗೂಡಿನ ಚಿಮಣಿಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಇದುವರೆಗೆ 9 ಮಂದಿ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು,
ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಮೋತಿಹಾರಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿಯವರ ಕಾರ್ಯಾಲಯ ಟ್ವೀಟ್ ಮಾಡಿದೆ.
ಮೋತಿಹಾರಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.