ಮಂಗಳವಾರ, ಜೂನ್ 28, 2022
21 °C

ಲಾಲು ಪತ್ನಿ ರಾಬ್ಡಿ ದೇವಿ ಆಯೋಜಿಸಿದ ಇಫ್ತಾರ್‌ನಲ್ಲಿ ನಿತೀಶ್‌ ಕುಮಾರ್‌ ಭಾಗಿ!

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಪಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ, ಲಾಲು ಪ್ರಸಾದ್‌ ಯಾದವ್‌ ಅವರ ಪತ್ನಿ ರಾಬ್ಡಿ ದೇವಿ ಅವರು ಶುಕ್ರವಾರ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಭಾಗವಹಿಸಿದ್ದಾರೆ.

ಪಟ್ನಾದಲ್ಲಿರುವ ರಾಬ್ಡಿ ದೇವಿ ಅವರ ನಿವಾಸದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ನಿತೀಶ್‌ ಭಾಗಿಯಾಗಿರುವ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮಾಜಿ ಉಪ ಮುಖ್ಯಮಂತ್ರಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌, ಲಾಲು ಪ್ರಸಾದ್‌ ಯಾದವ್‌ ಅವರ ಪುತ್ರಿ ಮೀಸಾ ಭಾರ್ತಿ ಅವರು ನಿತೀಶ್‌ ಅವರೊಂದಿಗೆ ಆತ್ಮೀಯವಾಗಿ ಮಾತನಾಡುತ್ತಿರುವುದು ಚಿತ್ರಗಳಲ್ಲಿದೆ.

ಇಫ್ತಾರ್‌ ಕೂಟದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ವೈರಲ್‌ ಆಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು