ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಚರ್ಚೆ: ಕೇಜ್ರಿವಾಲ್‌ ಭೇಟಿಯಾದ ನಿತೀಶ್‌ ಕುಮಾರ್‌

Last Updated 6 ಸೆಪ್ಟೆಂಬರ್ 2022, 14:54 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮಂಗಳವಾರ ಇಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ.

2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಗುರಿಯೊಂದಿಗೆ ನಿತೀಶ್‌ ಅವರು ದೆಹಲಿ ಪ್ರವಾಸ ಕೈಗೊಂಡಿದ್ದಾರೆ.

ಕೇಜ್ರಿವಾಲ್‌ ಜೊತೆಗಿನ ಸಭೆಯಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಹಾಗೂ ಜೆಡಿ(ಯು) ಮುಖಂಡ ಸಂಜಯ್‌ ಝಾ ಅವರೂ ಭಾಗವಹಿಸಿದ್ದರು.

ಇದಕ್ಕೂ ಮುನ್ನ ನಿತೀಶ್‌ ಅವರು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮತ್ತು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಅವರನ್ನು ಅವರ ಪಕ್ಷದ ಕಚೇರಿಗಳಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT