ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚೆ; ಕೇಜ್ರಿವಾಲ್ ಭೇಟಿ ಮಾಡಲಿರುವ ನಿತೀಶ್

Last Updated 6 ಸೆಪ್ಟೆಂಬರ್ 2022, 6:54 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು, ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹಾಗೂ ಎಡಪಕ್ಷಗಳ ನಾಯಕರನ್ನು ಮಂಗಳವಾರ ಭೇಟಿ ಮಾಡಿ ದೇಶದ ರಾಜಕೀಯ ಪರಿಸ್ಥಿತಿ ಕುರಿತು ಮಾತುಕತೆ ನಡೆಸಲಿದ್ದಾರೆ.

ನಿತೀಶ್,ಮೊದಲಿಗೆಸಿಪಿಐಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಂ ಯಚೂರಿ ಅವರನ್ನು ಭೇಟಿ ನಿಗದಿಯಾಗಿದೆ. ಅದಾದ ಬಳಿಕ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಅವರನ್ನು ಪಕ್ಷದ (ಸಿಪಿಐ) ಪ್ರಧಾನ ಕಚೇರಿಯಲ್ಲಿ ಭೇಟಿಯಾಗಲಿದ್ದಾರೆ.

ಮಧ್ಯಾಹ್ನ ಹರಿಯಾಣ ಮುಖ್ಯಮಂತ್ರಿ ಓಂ ಪ್ರಕಾಶ್‌ ಚೌಟಾಲಾ ಅವರೊಂದಿಗೆ ಮಾತುಕತೆ ನಡೆಸಿ, ನಂತರ ದೆಹಲಿ ಮುಖ್ಯಮಂತ್ರಿಯೂ ಆಗಿರುವ ಅರವಿಂದ ಕೇಜ್ರಿವಾಲ್‌ ಜೊತೆ ಸಭೆ ನಡೆಸಲಿದ್ದಾರೆ.

ಬಿಹಾರದಲ್ಲಿಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಆಗಮಿಸಿರುವ ನಿತೀಶ್‌, ಸೋಮವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು.

ಜೆಡಿ(ಯು) ನಾಯಕರಾಗಿರುವನಿತೀಶ್‌ ಕುಮಾರ್‌ ಅವರು ಬಿಜೆಪಿಯೊಂದಿಗೆ ಸೇರಿಬಿಹಾರದಲ್ಲಿ ಮೈತ್ರಿ ಸರ್ಕಾರ ರಚಿಸಿದ್ದರು. ಆದರೆ, ಕಳೆದ ತಿಂಗಳು ಬಿಜೆಪಿ ಜೊತೆಗಿನ ಸಂಬಂಧ ಕಡಿದುಕೊಂಡಿದ್ದ ಅವರುಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳ ಬೆಂಬಲದೊಂದಿಗೆ ಮತ್ತೆ ಮುಖ್ಯಮಂತ್ರಿ ಗಾದಿಗೇರಿದ್ದಾರೆ.

ನಿತೀಶ್‌ ಕುಮಾರ್‌ ಅವರು 2024ರ ಲೋಕಸಭೆ ಚುನಾವಣೆವೇಳೆ ಪ್ರಧಾನಿ ಹುದ್ದೆಗೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಲಿದ್ದಾರೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಜೆಡಿ(ಯು) ಇದನ್ನು ಅಲ್ಲಗಳೆದಿತ್ತು. ಈ ಬೆಳವಣಿಗೆಗಳ ನಡುವೆಯೇ, ಅವರು ದೆಹಲಿಗೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.

ಬಿಹಾರದಲ್ಲಿಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಆಗಮಿಸಿರುವ ನಿತೀಶ್‌, ಸೋಮವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT