ಗುರುವಾರ , ಜೂನ್ 24, 2021
30 °C

ಬಿಹಾರ ಚುನಾವಣೆ: ವರ್ಚುವಲ್‌ ಪ್ರಚಾರ!

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಈ ವರ್ಷದ ಅಂತ್ಯದಲ್ಲಿ ನಡೆಯುವ ಬಿಹಾರ ವಿಧಾನಸಭೆ ಚುನಾವಣೆಯ ವೇಳೆ ವರ್ಚುವಲ್‌ ಜೊತೆಗೆ ಬಹಿರಂಗ ಪ್ರಚಾರಕ್ಕೂ ಅವಕಾಶ ಸಿಗುವ ಸಾಧ್ಯತೆ ಇದೆ.

ಚುನಾವಣಾ ಆಯೋಗವು ಕೋವಿಡ್‌ ಕಾಲದಲ್ಲಿ ಹೊಸ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲು ಚಿಂತಿಸಿದೆ ಎಂದು ಆಯೋಗದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರ ಆಯೋಜಿಸಲು ರಾಜಕೀಯ ಪಕ್ಷಗಳಿಗೆ ಕೆಲ ಷರತ್ತುಗಳನ್ನು ವಿಧಿಸುವ ಸಾಧ್ಯತೆ ಇದೆ.

ನಾಮಪತ್ರ ಸಲ್ಲಿಕೆಯ ವೇಳೆ ಅಭ್ಯರ್ಥಿಯ ಜೊತೆಗೆ ಇಬ್ಬರಿಗೆ ಮಾತ್ರ ಅವಕಾಶ ನೀಡುವ ಬಗ್ಗೆಯೂ ಚುನಾವಣಾ ಆಯೋಗ ಚರ್ಚೆ ನಡೆಸುತ್ತಿದೆ. ಆನ್‌ಲೈನ್‌ ಮೂಲಕ ನಾಮಪತ್ರ ಸಲ್ಲಿಸುವ ವ್ಯವಸ್ಥೆಗೂ ಚಾಲನೆ ನೀಡುವ ಸಾಧ್ಯತೆ ಇದೆ. ಮನೆ ಮನೆ ಪ್ರಚಾರದ ವೇಳೆ ಮೂರಕ್ಕಿಂತ ಹೆಚ್ಚು ಮಂದಿಗೆ ಅವಕಾಶ ನೀಡದಿರುವ ಬಗ್ಗೆಯೂ ಚಿಂತಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು