ಸೋಮವಾರ, ಅಕ್ಟೋಬರ್ 3, 2022
24 °C

ಬಿಹಾರದ ರಾಜಕೀಯ ಮರುಮೈತ್ರಿಗೆ ಬಿಜೆಪಿಯ ಗೀಳೇ ಕಾರಣ: ಮಾರ್ಗರೆಟ್‌ ಆಳ್ವ 

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಬಿಹಾರದ ರಾಜಕೀಯ ಮರು ಮೈತ್ರಿಗೆ ಬಿಜೆಪಿಯೇ ಕಾರಣ ಎಂದು ಉಪ ರಾಷ್ಟ್ರಪತಿ ಚುನಾವಣೆಯ ಕಾಂಗ್ರೆಸ್‌ ನೇತೃತ್ವದ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿದ್ದ ಮಾರ್ಗರೆಟ್ ಆಳ್ವ ಅವರು ಅಭಿಪ್ರಾಯಪಟ್ಟಿದ್ದಾರೆ. 

ಬಿಹಾರದ ರಾಜಕೀಯ ಸ್ಥಿತ್ಯಂತರದ ಕುರಿತು ಮಂಗಳವಾರ ಅವರು ಟ್ವೀಟರ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
  
‘ಪ್ರಾದೇಶಿಕ ಪಕ್ಷಗಳ ನೆಲೆ ಕಸಿದುಕೊಳ್ಳಲು ಮೊದಲು ಅವರನ್ನು ಅಸ್ಥಿರಗೊಳಿಸಿ, ನಂತರ ಅವುಗಳನ್ನು ಕಬಳಿಸುವ ಬಿಜೆಪಿ ರಾಜಕೀಯ ಗೀಳಿನ ಪರಿಣಾಮವೇ ಬಿಹಾರದ ಇಂದಿನ ರಾಜಕೀಯ ಮರುಮೈತ್ರಿ. ಮಹಾರಾಷ್ಟ್ರ, ಆಂಧ್ರಪ್ರದೇಶ, ಒಡಿಶಾ, ತೆಲಂಗಾಣ, ಬಂಗಾಳ, ಜಾರ್ಖಂಡ್‌ನಲ್ಲಿಯೂ ಇದೇ ಕಾರ್ಯತಂತ್ರ ಜಾರಿಯಲ್ಲಿದೆ. ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಮಾತ್ರ ಬಿಜೆಪಿಯ ಈ ಕಾರ್ಯತಂತ್ರ ತಡೆಯಲು ಸಾಧ್ಯ’ ಎಂದು ಅವರು ಹೇಳಿದ್ದಾರೆ. 

ಇತ್ತೀಚೆಗಷ್ಟೇ ಪೂರ್ಣಗೊಂಡ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಕರ್ನಾಟಕದ ಮಾರ್ಗರೇಟ್‌ ಆಳ್ವ ಅವರು ಕಾಂಗ್ರೆಸ್‌ ನೇತೃತ್ವದ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಎನ್‌ಡಿಎ ಅಭ್ಯರ್ಥಿ ಜಗದೀಪ್‌ ಧನಕರ್‌ ಅವರ ಎದುರು ಅವರು ಸೋಲುಂಡರು.  

ನಿತೀಶ್‌ ಕುಮಾರ್‌ ಅವರು ಮಂಗಳವಾರ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಸರ್ಕಾರ ರಚಿಸಲು ನಿತೀಶ್‌ ಅವರಿಗೆ ಆರ್‌ಜೆಡಿ, ಕಾಂಗ್ರೆಸ್‌ ಬೆಂಬಲ ನೀಡಿವೆ. 

ನೂತನ ಸರ್ಕಾರದಲ್ಲಿ ನಿತೀಶ್‌ ಕುಮಾರ್‌ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿದ್ದು, ತೇಜಸ್ವಿ ಯಾದವ್‌ ಅವರು ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಗೊತ್ತಾಗಿದೆ. ಬುಧವಾರ ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಲಿದೆ. 

ಇವುಗಳನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು