ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಡಿಸಿಎಂ ಸುಶೀಲ್ ಕುಮಾರ್ ಮೋದಿಗೆ ಕೋವಿಡ್‌–19 ಪಾಸಿಟಿವ್; ಏಮ್ಸ್‌ಗೆ ದಾಖಲು

Last Updated 22 ಅಕ್ಟೋಬರ್ 2020, 10:57 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದ ಉಪಮುಖ್ಯಮಂತ್ರಿ ಸುಶೀಲ್‌ ಕುಮಾರ್ ಮೋದಿಗೆ ಕೋವಿಡ್‌–19 ಇರುವುದು ದೃಢಪಟ್ಟಿದೆ. ಅವರು ಗುರುವಾರ ಪಟ್ನಾದ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುಶೀಲ್‌ ಕುಮಾರ್‌ ಮೋದಿ ಅವರು ಟ್ವೀಟ್‌ ಮಾಡಿದ್ದು, 'ಪರೀಕ್ಷೆಯಲ್ಲಿ ಕೊರೊನಾಪಾಸಿಟಿವ್‌ ಬಂದಿದೆ. ಆರೋಗ್ಯ ಸ್ಥಿತಿ ಸಹಜವಾಗಿದೆ. ಕಳೆದ ಎರಡು ದಿನಗಳಿಂದ ಸ್ವಲ್ಪ ಜ್ವರ ಕಾಣಿಸಿಕೊಂಡಿದೆ. ಆರೋಗ್ಯದ ಮೇಲೆ ಹೆಚ್ಚಿನ ನಿಗಾವಹಿಸಲು ಪಟ್ನಾದ ಏಮ್ಸ್‌ಗೆ ದಾಖಲಾಗಿದ್ದೇನೆ. ಶ್ವಾಸಕೋಶದ ಸಿಟಿ ಸ್ಕ್ಯಾನ್‌ನಲ್ಲಿ ಫಲಿತಾಂಶ ಸಹಜವಾಗಿರುವುದು ತಿಳಿದು ಬಂದಿದೆ. ಶೀಘ್ರದಲ್ಲಿಯೇ ಚುನಾವಣಾ ಪ್ರಚಾರಕ್ಕೆ ಮರಳುವೆ' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT