ಶನಿವಾರ, ನವೆಂಬರ್ 28, 2020
18 °C
ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಮೇವಾ ಲಾಲ್‌ ಚೌಧರಿ

ಬಿಹಾರ: ಮೂರೇ ದಿನದಲ್ಲಿ ಶಿಕ್ಷಣ ಸಚಿವ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ಬಿಹಾರದ ಶಿಕ್ಷಣ ಸಚಿವ ಮೇವಾ ಲಾಲ್‌ ಚೌಧರಿ ತಮ್ಮ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಸಚಿವರಾಗಿ ನೇಮಕವಾದ ಮೂರು ದಿನಗಳಲ್ಲೇ ಚೌಧರಿ ರಾಜೀನಾಮೆ ನೀಡಿದ್ದಾರೆ.

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಚೌಧರಿ ವಿರುದ್ಧ ವಿರೋಧ ಪಕ್ಷಗಳು ಹರಿಹಾಯ್ದಿದ್ದವು. ‘ಕಳಂಕಿತರಾಗಿರುವ ಚೌಧರಿ ಅವರನ್ನು ಸಂಪುಟಕ್ಕೆ ಏಕೆ ಸೇರಿಸಿಕೊಳ್ಳಲಾಗಿದೆ’ ಎಂದು ರಾಷ್ಟ್ರೀಯ ಜನತಾ ದಳ ಪ್ರಶ್ನಿಸಿತ್ತು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಐದು ವರ್ಷಗಳ ಹಿಂದೆ ಭಾಗಲ್ ಪುರ ಕೃಷಿ ವಿಶ್ವವಿದ್ಯಾಲಯಕ್ಕೆ ಚೌಧರಿ ಅವರು ಕುಲಪತಿಯಾಗಿದ್ದ ಸಂದರ್ಭದಲ್ಲಿ ಸಹಾಯಕ ಪ್ರಾಧ್ಯಾಪಕ ಮತ್ತು ಕಿರಿಯ ವಿಜ್ಞಾನಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು ಎಂದು ಆರೋಪಿಸಲಾಗಿತ್ತು.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2017ರಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು