ಶುಕ್ರವಾರ, ಡಿಸೆಂಬರ್ 4, 2020
21 °C
ಆರ್‌ಜೆಡಿ ಅತಿದೊಡ್ಡ ಪಕ್ಷ

ಬಿಹಾರ ಗದ್ದುಗೆ ಗೆದ್ದ ಎನ್‌ಡಿಎ: ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Nitish kumar -PTI

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶವು ಮತಗಟ್ಟೆ ಸಮೀಕ್ಷೆಯ ಎಲ್ಲ ಅಂದಾಜುಗಳನ್ನು ಸುಳ್ಳಾಗಿಸಿ ಮತ್ತೆ ಎನ್‌ಡಿಎಗೆ ಅಧಿಕಾರ ನೀಡಿದೆ. ಇದರೊಂದಿಗೆ, ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಸತತ ನಾಲ್ಕನೇ ಅವಧಿಗೆ ಸ್ಥಾನ ಉಳಿಸಿಕೊಳ್ಳುವುದು ಖಚಿತವಾಗಿದೆ.

ಬುಧವಾರ ಮುಂಜಾನೆ ವೇಳೆಗೆ ಎಲ್ಲ 243 ಕ್ಷೇತ್ರಗಳ ಫಲಿತಾಂಶವನ್ನು ಚುನಾವಣಾ ಆಯೋಗ ಘೋಷಿಸಿದೆ. ಬಿಜೆಪಿ, ಜೆಡಿಯು ನೇತೃತ್ವದ ಎನ್‌ಡಿಎ 125 ಕ್ಷೇತ್ರಗಳಲ್ಲಿ ಗೆಲುವು ಪಡೆದಿದೆ. ಆರ್‌ಜೆಡಿ ನೇತೃತ್ವದ ಮಹಾಗಠಬಂಧನ 110 ಸ್ಥಾನಗಳನ್ನಷ್ಟೇ ಗಳಿಸಿದೆ. ಆದರೆ, 75 ಸ್ಥಾನಗಳಲ್ಲಿ ಗೆಲುವು ಪಡೆಯವ ಮೂಲಕ ಆರ್‌ಜೆಡಿಯು ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಇದನ್ನೂ ಓದಿ: 

ಎನ್‌ಡಿಎ ಮೈತ್ರಿಕೂಟದ ಪೈಕಿ ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಎಚ್‌ಎಎಂ 4 ಕ್ಷೇತ್ರಗಳಲ್ಲಿ ಜಯ ಗಳಿಸಿವೆ.

ಮಹಾಗಠಬಂಧನ ಪೈಕಿ ಆರ್‌ಜೆಡಿ 75, ಕಾಂಗ್ರೆಸ್ 19 ಹಾಗೂ ಎಡಪಕ್ಷಗಳು 16 ಸ್ಥಾನ ಗಳಿಸಿವೆ.

ಉಳಿದಂತೆ ಎಐಎಂಐಎಂ 5, ಬಿಎಸ್‌ಪಿ 1, ಎಲ್‌ಜೆಪಿ 1 ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: 

ನಿತೀಶ್‌ಗೆ ಮುಖ್ಯಮಂತ್ರಿ ಸ್ಥಾನ

ಜೆಡಿಯುಗಿಂತ ಬಿಜೆಪಿ ಗೆದ್ದ ಕ್ಷೇತ್ರಗಳ ಸಂಖ್ಯೆ ಹೆಚ್ಚು. ಹಾಗಿದ್ದರೂ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೀಡಿದ್ದ ಭರವಸೆಯಂತೆ ನಿತೀಶ್‌ ಕುಮಾರ್‌ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: 

‘ನಮಗೆ ಕಡಿಮೆ ಸಂಖ್ಯೆಯ ಕ್ಷೇತ್ರಗಳು ಸಿಕ್ಕಿವೆ ಎಂಬುದು ನಿಜ. ಆದರೆ, ನಿತೀಶ್‌ ಅವರೇ ಮುಂದಿನ ಮುಖ್ಯಮಂತ್ರಿ ಎಂಬುದೂ ನಿಜ’ ಎಂದು ಜೆಡಿಯು ಮುಖ್ಯ ವಕ್ತಾರ ಸಂಜಯ್‌ ಸಿಂಗ್‌ ಹೇಳಿದ್ದಾರೆ. ಚುನಾವಣಾ ಆಯೋಗವನ್ನು ದೂರುವ ಬದಲು ಆರ್‌ಜೆಡಿ ಸೋಲು ಒಪ್ಪಿಕೊಳ್ಳಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.

ಗೆದ್ದ ಪ್ರಮುಖರು

* ತೇಜಸ್ವಿ ಯಾದವ್‌ (ರಾಘೋಪುರ ಕ್ಷೇತ್ರ)
* ತೇಜ್‌ ಪ್ರತಾಪ್‌ (ಹಸನ್‌ಪುರ ಕ್ಷೇತ್ರ)
* ಶ್ರೇಯಸಿ ಸಿಂಗ್‌ (ಜಮುಯಿ ಕ್ಷೇತ್ರ)

ಸೋತ ಪ್ರಮುಖರು

* ಲವ ಸಿನ್ಹಾ (ಬಂಕಿಪುರ)
* ಸುಭಾಷಿಣಿ ಯಾದವ್‌ (ಬಿಹಾರಿಗಂಜ್)

(ಎನ್‌ಡಿಎಯ ಪ್ರಮುಖ ನಾಯಕರಾದ ನಿತೀಶ್‌ ಕುಮಾರ್‌ ಮತ್ತು ಉಪಮುಖ್ಯಮಂತ್ರಿ ಸುಶೀಲ್‌ ಮೋದಿ ಅವರು ವಿಧಾನ ಪರಿಷತ್‌ ಸದಸ್ಯರು. ಹಾಗಾಗಿ, ಅವರಿಬ್ಬರೂ ವಿಧಾನಸಭೆಗೆ ಸ್ಪರ್ಧಿಸಿಲ್ಲ.)

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು