ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದಲ್ಲಿ ಪ್ರಜಾಪ್ರಭುತ್ವ ಮತ್ತೊಮ್ಮೆ ಗೆದ್ದಿದೆ: ಪ್ರಧಾನಿ ನರೇಂದ್ರ ಮೋದಿ

ಬಿಹಾರದ ಮತದಾರರಿಗೆ ಮೋದಿ, ಅಮಿತ್ ಶಾ ಧನ್ಯವಾದ
Last Updated 11 ನವೆಂಬರ್ 2020, 2:57 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಬಹುಮತ ದೊರಕಿಸಿಕೊಟ್ಟದ್ದಕ್ಕಾಗಿ ಅಲ್ಲಿನ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಧನ್ಯವಾದ ಸಮರ್ಪಿಸಿದ್ದಾರೆ.

‘ಜನರ ಆಶೀರ್ವಾದದೊಂದಿಗೆ ಬಿಹಾರದಲ್ಲಿ ಪ್ರಜಾಪ್ರಭುತ್ವ ಮತ್ತೊಮ್ಮೆ ಗೆದ್ದಿದೆ. ಬಿಹಾರ ಬಿಜೆಪಿಯೊಂದಿಗೆ ಎನ್‌ಡಿಎಯ ಎಲ್ಲ ಕಾರ್ಯಕರ್ತರು ದೃಢ ಸಂಕಲ್ಪ ಮತ್ತು ಸಮರ್ಪಣಾ ಮನೋಭಾವದೊಂದಿಗೆ ಕೆಲಸ ಮಾಡಿರುವುದು ಅದ್ಭುತವಾಗಿದೆ. ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಜತೆಗೆ, ಬಿಹಾರದ ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಬಿಹಾರದ ಪ್ರತಿಯೊಂದು ವರ್ಗದ ಜನರೂ ಪೊಳ್ಳು ರಾಜಕೀಯ, ಜಾತಿವಾದ ಮತ್ತು ಓಲೈಕೆ ರಾಜಕೀಯವನ್ನು ತಿರಸ್ಕರಿಸಿದ್ದಲ್ಲದೆ, ಮತ್ತೊಮ್ಮೆ ಎನ್‌ಡಿಎಯ ಅಭಿವೃದ್ಧಿ ನೀತಿಯನ್ನು ಬೆಂಬಲಿಸಿದ್ದಾರೆ. ಇದು ಪ್ರತಿ ಬಿಹಾರಿಯ ಆಶಯ ಮತ್ತು ಆಕಾಂಕ್ಷೆಯ ಗೆಲುವು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಭಿವೃದ್ಧಿಯ ‘ಡಬಲ್ ಎಂಜಿನ್’ನ ಗೆಲುವು. ಬಿಹಾರ ಬಿಜೆಪಿಯ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು’ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಬುಧವಾರ ಮುಂಜಾನೆ ವೇಳೆಗೆ ಬಿಹಾರದ ಎಲ್ಲ 243 ಕ್ಷೇತ್ರಗಳ ಫಲಿತಾಂಶವನ್ನು ಚುನಾವಣಾ ಆಯೋಗ ಘೋಷಿಸಿದ್ದು, ಬಿಜೆಪಿ, ಜೆಡಿಯು ನೇತೃತ್ವದ ಎನ್‌ಡಿಎ 125 ಕ್ಷೇತ್ರಗಳಲ್ಲಿ ಗೆಲುವು ಪಡೆದಿದೆ. ಇದರೊಂದಿಗೆ ಎನ್‌ಡಿಎ ಸರ್ಕಾರ ರಚನೆ ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT