ಶುಕ್ರವಾರ, ಮೇ 20, 2022
25 °C
ಬಿಹಾರ ಚುನಾವಣೆ

ಕೋವಿಡ್‌ ಮಾರ್ಗಸೂಚಿ ಅನುಸರಿಸಿ, ಪ್ರಜಾಪ್ರಭುತ್ವದ ಪರ್ವದಲ್ಲಿ ಭಾಗಿಯಾಗಿ: ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಬಿಹಾರದ 71 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯುತ್ತಿದ್ದು, 'ಕೋವಿಡ್‌ –19 ಸಂಬಂಧಿಸಿದ ಎಲ್ಲ ಮಾರ್ಗಸೂಚಿಗಳನ್ನು ಅನುಸರಿಸಿ ಪ್ರಜಾಪ್ರಭುತ್ವದ ಪರ್ವದಲ್ಲಿ ಭಾಗಿಯಾಗಿ' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟಿಸಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಕೋವಿಡ್‌ಗೆ ಸಂಬಂಧಿತ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಹಾಗೂ ಪ್ರಜಾಪ್ರಭುತ್ವದ ಪರ್ವದಲ್ಲಿ ಭಾಗಿಯಾಗಿ. ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಎರಡು ಗಜಗಳ ಅಂತರ ಕಾಯ್ದುಕೊಳ್ಳುವಂತೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.

ಆರ್‌ಜೆಡಿ ನೇತೃತ್ವದ ಮಹಾಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಮತ್ತು ಎಡಪಕ್ಷಗಳು ಸ್ಪರ್ಧಿಸಿದ್ದು, 'ಈ ಬಾರಿ ನ್ಯಾಯ ಸಮ್ಮತವಾದ, ರೈತರ ಪರವಾದ, ಉದ್ಯೋಗ ಸ್ನೇಹಿಯಾದ ಮಹಾಮೈತ್ರಿಗೆ ಮಾತ್ರವೇ ಮತ ನೀಡಿ' ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಕೋರಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಟ್ವೀಟ್‌ ಮಾಡಿದ್ದು, 'ಕೋವಿಡ್‌–19 ಸಾಂಕ್ರಾಮಿಕದ ನಡುವೆ ನಡೆಯುತ್ತಿರುವ ಮೊದಲ ಸಾರ್ವತ್ರಿಕ ಚುನಾವಣೆ ಇದಾಗಿದೆ. ಬಿಹಾರದ 71 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಸಾಂಕ್ರಾಮಿಕ ಮಣಿಸಬೇಕಿದೆ ಹಾಗೂ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಬೇಕಿದೆ. ಸುರಕ್ಷಿತವಾಗಿರಿ, ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ...'  ಎಂದಿದ್ದಾರೆ.

ಇದನ್ನೂ ಓದಿ:

ರಾಜ್ಯದ ಒಟ್ಟು 71 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು,  1,066 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಬುಧವಾರ ಬಿಹಾರದಲ್ಲಿ ಚುನಾವಣಾ ಪ್ರಚಾರಗಳಲ್ಲಿ ಭಾಗಿಯಾಗಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು