ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: 2ನೇ ಹಂತದ ಮತದಾನ ಇಂದು

Last Updated 2 ನವೆಂಬರ್ 2020, 17:33 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಹಂತದಲ್ಲಿ ಒಟ್ಟು 94 ಕ್ಷೇತ್ರಗಳಿಗೆ ಮತದಾನವು ಮಂಗಳವಾರ (ನ.3) ನಡೆಯಲಿದೆ. ನಿತೀಶ್‌ ಕುಮಾರ್‌ ಸಂಪುಟದ ನಾಲ್ವರು ಸಚಿವರು,ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್‌ ಹಾಗೂ ಇತರ ಕೆಲವು ನಾಯಕರ ಭವಿಷ್ಯವು ಈ ಹಂತದಲ್ಲಿ ನಿರ್ಧಾರವಾಗಲಿದೆ.

ಇದರ ಜತೆಗೆ, ಮಧ್ಯಪ್ರದೇಶದ 28 ಕ್ಷೇತ್ರಗಳು, ಗುಜರಾತ್‌ನ 8 ವಿಧಾನಸಭಾ ಕ್ಷೇತ್ರಗಳೂ ಸೇರಿ 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯೂ ನಡೆಯಲಿದೆ.

ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಕಾಂಗ್ರೆಸ್‌ನ ಶಾಸಕರು ಪಕ್ಷ ತೊರೆದು ಬಿಜೆಪಿ ಸೇರಿದ್ದರಿಂದ ಅಲ್ಲಿ 25 ಕ್ಷೇತ್ರಗಳು ತೆರವಾಗಿದ್ದವು. ಮೂವರು ಶಾಸಕರು ನಿಧನ ಹೊಂದಿದ್ದರು. ಈ ಎಲ್ಲಾ ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯಲಿದೆ.

ಗುಜರಾತ್‌ನಲ್ಲಿ ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ನ ಶಾಸಕರು ರಾಜೀನಾಮೆ ನೀಡಿದ್ದರಿಂದ 8 ಕ್ಷೇತ್ರಗಳು ತೆರವಾಗಿದ್ದವು.

ಶೇ 32 ಅಭ್ಯರ್ಥಿಗಳಿಗೆ ಕ್ರಿಮಿನಲ್‌ ಹಿನ್ನೆಲೆ: ‘ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ 3,722 ಅಭ್ಯರ್ಥಿಗಳ ಪೈಕಿ 1,201 ಅಭ್ಯರ್ಥಿಗಳು (ಶೇ 32ರಷ್ಟು) ತಮ್ಮ ವಿರುದ್ಧ ಕ್ರಿಮಿನಲ್‌ ದೂರುಗಳು ದಾಖಲಾಗಿವೆ ಎಂದು ಘೋಷಿಸಿಕೊಂಡಿದ್ದಾರೆ. ಅವರಲ್ಲಿ 115 ಮಂದಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ (ಇವರಲ್ಲಿ 12 ಮಂದಿ ವಿರುದ್ಧ ಅತ್ಯಾಚಾರದ ಆರೋಪ) ಮತ್ತು 73 ಮಂದಿ ಕೊಲೆಯ ಆರೋಪ ಎದುರಿಸುತ್ತಿದ್ದಾರೆ’ ಎಂದು ಅಸೋಸಿಯೇಶನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್‌(ಎಡಿಆರ್‌) ವರದಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT