ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರನ್ನು ಭಯದಲ್ಲಿಡಲು ನಿತೀಶ್‌ ಆಡಳಿತ ಬಯಸುತ್ತದೆ: ತೇಜಸ್ವಿ ಯಾದವ್‌ ವಾಗ್ದಾಳಿ

Last Updated 7 ಸೆಪ್ಟೆಂಬರ್ 2020, 9:42 IST
ಅಕ್ಷರ ಗಾತ್ರ

ಪಟ್ನಾ: ಬಿಹಾರ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಅಲ್ಲಿನ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳ ಭರಾಟೆ ಜೋರಾಗುತ್ತಿದೆ.

ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಆಡಳಿತದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರುಬಿಹಾರ ಸರ್ಕಾರ ಜನರನ್ನು ಭಯದ ವಾತಾವರಣದಲ್ಲಿಡಲು ಬಯಸುತ್ತದೆ ಎಂದು ಆರೋಪಿಸಿದ್ದಾರೆ.

'ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ ನೀಡಿರುವ ಮಾಹಿತಿಯ ಪ್ರಕಾರ, ಬಿಹಾರದಲ್ಲಿ ಅಪರಾಧ ಪ್ರಮಾಣ ಶೇ.40ರಷ್ಟಿದೆ. ಪ್ರತಿ 4 ಗಂಟೆಗಳಿಗೊಮ್ಮೆ ಅತ್ಯಾಚಾರದ ಘಟನೆ ನಡೆಯುತ್ತಿದ್ದರೆ, ಪ್ರತಿ 5 ಗಂಟೆಗೆ ಒಂದು ಕೊಲೆಯಾಗುತ್ತದೆ' ಎಂದು ತೇಜಸ್ವಿ ಯಾದವ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT