ಬುಧವಾರ, ಆಗಸ್ಟ್ 4, 2021
24 °C

ಕೋವಿಡ್‌: ಬಿಹಾರ ಮುಖ್ಯ ಕಾರ್ಯದರ್ಶಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ಕೋವಿಡ್‌–19 ಸೋಂಕಿಗೆ ಒಳಗಾಗಿದ್ದ ಬಿಹಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರುಣ್‌ ಕುಮಾರ್‌ ಸಿಂಗ್‌ ಅವರು ಶುಕ್ರವಾರ ನಿಧನರಾಗಿದ್ದಾರೆ.

1985ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದ ಅರುಣ್‌ ಕುಮಾರ್‌ ಸಿಂಗ್‌ ಅವರು, ಇದೇ ವರ್ಷದ ಫೆಬ್ರುವರಿ 28ರಂದು ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಇದಕ್ಕೂ ಮೊದಲು ರಾಜ್ಯದಲ್ಲಿ ಅಭಿವೃದ್ಧಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

ಸೋಂಕಿಗೆ ಒಳಗಾಗಿದ್ದ ಸಿಂಗ್‌ ಅವರನ್ನು ಏಪ್ರಿಲ್‌ 15ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಹಾರದಲ್ಲಿ ಇದೇ ತಿಂಗಳಲ್ಲಿ ಕೋವಿಡ್‌ ಸೋಂಕಿಗೆ ಒಳಗಾಗಿ ಸಾವಿಗೀಡಾದ ನಾಲ್ಕನೇ ಐಎಎಸ್‌ ಅಧಿಕಾರಿ ಇವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು