ಮಂಗಳವಾರ, ಮಾರ್ಚ್ 21, 2023
29 °C

ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ಗೆ ಜೀವ ಬೆದರಿಕೆ: ಬಿಹಾರ ಮೂಲದ ವ್ಯಕ್ತಿ ಬಂಧನ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ (ಮಹಾರಾಷ್ಟ್ರ): ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ ಅವರಿಗೆ ಜೀವ ಬೆದರಿಕೆ ಹಾಕಿದ್ದ ಬಿಹಾರ ಮೂಲದ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

ಬಂಧಿತ ಆರೋಪಿಯನ್ನು ನಾರಾಯಣ್‌ಕುಮಾರ್ ಸೋನಿ ಎಂದು ಗುರುತಿಸಲಾಗಿದೆ. ಈತ ಕಳೆದ ಮೂರು ನಾಲ್ಕು ತಿಂಗಳಿನಿಂದ ಶರದ್‌ ಪವಾರ್‌ರ ಮುಂಬೈನ ‘ಸಿಲ್ವರ್‌ ಓಕ್‌’ ನಿವಾಸಕ್ಕೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ. ಜತೆಗೆ, ನಿವಾಸದಲ್ಲಿ ಕರ್ತವ್ಯನಿರತ ಪೇದೆಗಳಿಗೆ ‘ಮುಂಬೈಗೆ ಬಂದು ಶರದ್‌ ಪವಾರ್ ಸೇರಿದಂತೆ ನಿಮ್ಮನ್ನು ಕೊಲ್ಲುತ್ತೇನೆ’ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. 

ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಐಪಿಸಿ ಸೆಕ್ಷನ್‌ 294 ಮತ್ತು 506–II ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು