ಬುಧವಾರ, ಮಾರ್ಚ್ 22, 2023
26 °C

ಬಿಹಾರ: ಕಳ್ಳಬಟ್ಟಿ ಸಾರಾಯಿ ದುರಂತದ ಪ್ರಮುಖ ಆರೋಪಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಟ್ನಾ/ಸಾರಣ್‌: ಬಿಹಾರದ ಸಾರಣ್‌ ಜಿಲ್ಲೆಯಲ್ಲಿ ಸಂಭವಿಸಿದ ಕಳ್ಳಬಟ್ಟಿ ಸಾರಾಯಿ ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಒಟ್ಟು 38 ಮಂದಿಯ ಸಾವಿಗೆ ಕಾರಣವಾಗಿದ್ದ ಈ ಘಟನೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ವಿಶೇಷ ಪೊಲೀಸ್ ತನಿಖಾ ತಂಡವು, ದುರಂತದ ‘ಮಾಸ್ಟರ್ ಮೈಂಡ್’ ಎನ್ನಲಾದ ಪ್ರಮುಖ ಆರೋಪಿ ಹೋಮಿಯೋಪಥಿ ಕಾಂಪೌಂಡರ್‌ನನ್ನು ಬಂಧಿಸಿದೆ’ ಎಂದು ಸಾರಣ್‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಮಾಹಿತಿ ನೀಡಿದ್ದಾರೆ. 

‘ಉತ್ತರಪ್ರದೇಶದಿಂದ ರಾಸಾಯನಿಕಗಳನ್ನು ಸಾಗಿಸಲು ಹಾಗೂ ಸಾರಣ್‌ ಜಿಲ್ಲೆಗೆ ಸಾರಾಯಿಯನ್ನು ಸರಬರಾಜು ಮಾಡಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಕಲಿ ಮದ್ಯವನ್ನು ತಯಾರಿಸಲು ಬಳಸಲಾಗಿದ್ದ ರಾಸಾಯನಿಕಗಳ ಖಾಲಿ ಬಾಟಲಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ. 

ಈ ಹಿಂದೆ ಘಟನೆಗೆ ಸಂಬಂಧಿಸಿದಂತೆ ಎಸ್‌ಐಟಿ ಒಂಬತ್ತು ಜನರನ್ನು ಬಂಧಿಸಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು